News Kannada
Saturday, March 02 2024
ಉಡುಪಿ

ಕಾಂಗ್ರೆಸ್ ನಾಯಕರಿಗೆ ಕೇಸರಿ ಶಾಲಿನ ಮೇಲೆ ಪ್ರೀತಿ ಹುಟ್ಟಿರುವುದು ಚುನಾವಣಾ ಕುತಂತ್ರ- ಕೋಟ

congress-leaders-love-for-saffron-shawls-is-an-election-ploy-kota-srinivas-poojary
Photo Credit : News Kannada

ಕುಂದಾಪುರ: ಕಾಂಗ್ರೆಸ್ ನಾಯಕರಿಗೆ ಚುನಾವಣೆ ಸಂದರ್ಭದಲ್ಲಿ ದಿಢೀರ್ ಅಂತ ಕೇಸರಿ ಶಾಲಿನ ಮೇಲೆ ಪ್ರೀತಿ ಹುಟ್ಟಿರುವುದು ಚುನಾವಣೆ ತಂತ್ರದ ಭಾಗವಾಗಿದೆ.ಬಿಜೆಪಿ ಪಕ್ಷ ಹಿಂದುತ್ವದ ಗುತ್ತಿಗೆ ಪಡೆದಿಲ್ಲ ನಿಜ,ತಾವು ಹಿಂದೂ ಎಂದು ಹೇಳುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆ ಪರವಾಗಿ ನಿಂತು ಕೊಳ್ಳಲಿ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಸವಾಲನ್ನು ಹಾಕಿದ್ದಾರೆ.

ಬೈಂದೂರು ಬಿಜೆಪಿ ಕಛೇರಿಯಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಡವರು,ದುರ್ಬಲ ವರ್ಗದವರ ಏಳಿಗೆಗಾಗಿ ಭಾರತೀಯ ಜನತಾ ಪಕ್ಷ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ.ರಾಜ್ಯದಲ್ಲಿ ನೀಡಿದ ಜನೋಪಯೋಗಿ ಆಡಳಿತದಿಂದ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಕರಾವಳಿ ಭಾಗದಲ್ಲಿ ಗರಿಷ್ಠ ಸೀಟುಗಳನ್ನು ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾಮಾನ್ಯ ಜನರಲ್ಲಿ ಗುರುರಾಜ್ ಗಂಟಿಹೊಳೆ ಒಬ್ಬರು ಅವರ ಬಗ್ಗೆ ಕ್ಷೇತ್ರದ ಜನರು ಪ್ರೀತಿ ತೋರಿಸುತ್ತಿದ್ದಾರೆ, ಗುರುರಾಜ್ ಗಂಟಿಹೊಳೆ ಅಂತಹ ವ್ಯಕ್ತಿಗಳು ವಿಧಾನಸೌಧದಲ್ಲಿ ಇದ್ದರೆ ಸೊಬಗು ಹೆಚ್ಚುತ್ತದೆ. ಬೈಂದೂರು ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ ಗುರುರಾಜ್ ಗಂಟಿಹೊಳೆ ಗೆಲುವು ನಿಶ್ಚಿತ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಮೋರ್ಚಾ ಉಪಾಧ್ಯಕ್ಷೆ ಡಾ.ಜ್ಯೋತಿ ಪಾಂಡ್ಯ ಸೇಥ್, ಜಿಲ್ಲಾ ಪ್ರಭಾರಿ ಶ್ಯಾಮಲಾ ಎಸ್ ಕುಂದರ್,ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಬಟವಾಡಿ,ಯುವ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಪ್ರಜ್ವಲ್ ಶೆಟ್ಟಿ,ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಖಾರ್ವಿ, ಬೈಂದೂರು ಬಿಜೆಪಿ ಮಾಧ್ಯಮ ಸಂಚಾಲಕ ಗಣೇಶ್ ಗಾಣಿಗ ಉಪ್ಪುಂದ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು