ಕುಂದಾಪುರ: ವಂಚನೆ ಆರೋಪಿ ಚೈತ್ರಾ ಹೆಸರಿನ ಜತೆಗೆ ಕುಂದಾಪುರ ತಾಲೂಕಿನ ಹೆಸರನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಬೆಂಗಳೂರಿನ ಹನುಮಂತ ನಗರ ನಿವಾಸಿ ಕುಂದಾಪುರ ಮೂಲದ ಉದ್ಯಮಿ ಗಣೇಶ್ ಶೆಟ್ಟಿ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವ್ಯಕ್ತಿಯೊಬ್ಬರು ದಾವೆ ಹೂಡಿದ್ದಾರೆ. ದಾವೆಯು ಶನಿವಾರ ಅಥವಾ ಸೋಮವಾರ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ.
ಕುಂದಾಪುರ ಎಂಬುದು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದೆ. 10 ಮತ್ತು 11ನೇ ಶತಮಾನದಲ್ಲಿ ಅಲುಪು ರಾಜವಂಶಸ್ಥರಾದ ಕುಂದವರ್ಮ ಅವರು ಕುಂದಾಪುರವನ್ನು ಆಳ್ವಿಕೆ ನಡೆಸಿದ್ದರು. ಐತಿಹಾಸಿಕ ಕುಂದೇಶ್ವರ ದೇವಸ್ಥಾನ ಸಹ ನಿರ್ಮಿಸಿದ್ದಾರೆ. ಕದಂಬರು, ಚಾಲುಕ್ಯ, ಹೊಯ್ಸಳ, ವಿಜಯನಗರ ಅರಸರು ಕುಂದಾಪುರ ಪಟ್ಟಣದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆನಂತರ ಪೋರ್ಚಗೀಸರು , ಟಿಪ್ಪುಸುಲ್ತಾನ್, ಬ್ರೀಟಿಷರು ಕುಂದಾಪುರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಇಂದಿಗೂ ಅನೇಕ ಐತಿಹಾಸಿಕ ದೇವಸ್ಥಾಗಳಿಂದ ಕುಂದಾಪುರ ಖ್ಯಾತಿ ಪಡೆದಿದೆ ಎಂದು ದಾವೆಯಲ್ಲಿ ವಿವರಿಸಲಾಗಿದೆ.
ಮಾಧ್ಯಮಗಳು ಚೈತ್ರ ಹೆಸರು ಬಳುಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಘಾಸಿಯಾಗುತ್ತಿದೆ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.