News Karnataka Kannada
Friday, March 29 2024
Cricket
ಉಡುಪಿ

ಗುರುರಾಜ ಗಂಟಿಹೊಳೆ 25 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ: ಬಿಎಸ್ ವೈ

Gururaja Gantihole will win by over 25,000 votes: BSY
Photo Credit : News Kannada

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ಸಹಿತವಾಗಿ ರಾಜ್ಯದಲ್ಲಿ 130 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ನಡೆಸುವುದು ಸತ್ಯ.ಹಾಗೆಯೇ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆಯವರು 25 ರಿಂದ 30 ಸಾವಿರ ಮತಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

ವಂಡ್ಸೆಯಲ್ಲಿ ಶನಿವಾರ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದವರು.

ಬೈಂದೂರು ಕ್ಷೇತ್ರಕ್ಕೆ ಯೋಗ್ಯ, ಪ್ರಾಮಾಣಿಕ ಅಭ್ಯರ್ಥಿಯನ್ನು ಪಕ್ಷ ನೀಡಿದೆ.ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.ಗುರುರಾಜ ಗಂಟೆಹೊಳೆಯವರು ಚಪ್ಪಲಿಯನ್ನು ಹಾಕದೆ ಪಕ್ಷಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ದೇವರು ಇನ್ನಷ್ಟು ಶಕ್ತಿಯನ್ನು ನೀಡಲಿದ್ದಾರೆ. ಶಾಸಕರಾಗಿ ವಿಧಾನಸಭೆ ಪ್ರವೇಶ ಮಾಡಲಿದ್ದಾರೆ ಎಂದರು.

ಪ್ರಧಾನ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಮೊದಲಾದವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಬಿಜೆಪಿ 130 ಸೀಟುಗಳನ್ನು ಗೆಲ್ಲಲಿದ್ದೇವೆ ಎಂಬ ಭರವಸೆಯನ್ನು ಅವರಿಗೆ ಈಗಾಗಲೇ ನೀಡಿದ್ದೇವೆ. ಹೀಗಾಗಿ ನಾವೆಲ್ಲರೂ ಸೇರಿ ಗುರುರಾಜ ಗಂಟಿಹೊಳೆಯವರನ್ನು ಗೆಲ್ಲಿಸಬೇಕು.ನಿಮ್ಮೆಲ್ಲರ ಮೇಲೆ ಪೂರ್ಣ ವಿಶ್ವಾಸವಿದೆ ಎಂದರು.

ಚುನಾವಣೆ ಸಂದರ್ಭದಲ್ಲಿ ಕೆಲವರು ನಮ್ಮ ಅಭ್ಯರ್ಥಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದ್ಯಾವುದಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲ. ಯಾರು ಕೂಡ ಇಂಥ ಅಪಪ್ರಚಾರಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಾವೆಲ್ಲರೂ ಹುಮ್ಮಸ್ಸಿನಿಂದ ಇನಷ್ಟು ವೇಗವಾಗಿ ಚುನಾವಣೆ ಕಾರ್ಯ ಮಾಡುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು