News Karnataka Kannada
Friday, March 29 2024
Cricket
ಉಡುಪಿ

ಕಾರ್ಕಳ: ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ದೂರು ದಾಖಲು

A complaint has been lodged against Sri Rama Sene leader Pramod Muthalik.
Photo Credit : News Kannada

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಶ್ರೀರಾಮ ಸೇನೆಯ ರಾಷ್ಟ್ರೀಯ ಸವೋಚ್ಛ ನಾಯಕ ಮುಖಂಡ ಪ್ರಮೋದ್ ಮುತಾಲಿಕ್ ಹಾಗೂ ಶ್ರೀ ರಾಮ ಸೇನೆಯ ಹಲವು ಮುಖಂಡ ವಿರುದ್ಧ ಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಏಪ್ರಿಲ್ 8 ರಂದು ನಡೆದ ಚುನಾವಣಾ ಪ್ರಚಾರ ಭಾಷಣದಲ್ಲಿ ಕಬ್ಬಿನಾಲೆ ಭಾಗದ ಜನಾಂಗದವರು ಕಾಡು ಜನರು ಪೂರ್ತಿಯಾಗಿ ಹಾಕಿಕೊಳ್ಳಲಿಕ್ಕೆ ಬಟ್ಟೆ ಇಲ್ಲವೆಂದು ದಲಿತ ಸಮಾಜವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗೋಪಾಲ ಗೌಡ ಎಂಬವರು ಮುತಾಲಿಕ್ ಹಾಗೂ ಇತರರ ವಿರುದ್ಧ ಹೆಬ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ಪ್ರತಿರೋಧ ಕಾಯ್ದೆಯನ್ವಯ, ದಲಿತ ಜನಾಂಗದವರಿಗೆ ಅವಹೇಳನಕಾರಿಯಾಗಿ ಮಾತನಾಡಿದ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ಹರೀಶ್ ಅಧಿಕಾರಿ,ವಿವೇಕಾನಂದಶೆಣೈ,ಪ್ರವೀಣ್ ಪೂಜಾರಿ, ಪೂಜಾರಿ, ದಿವ್ಯ ನಾಯಕ್, ಸುಭಾಷ್ ಚಂದ್ರ ಹೆಗ್ಡೆಯವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಗೋಪಾಲ ಗೌಡ ದೂರು ನೀಡಿದ್ದಾರೆ.

ಚುನಾವಣೆ ಅಂತಿಮ ಹಂತಕ್ಕೆ ತಲುಪಿದ್ದು, ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಈ ನಡುವೆ ಅಭ್ಯರ್ಥಿ ಹಾಗೂ ಇತರ ಮುಖಂಡ ವಿರುದ್ಧ ದಾಖಲಾಗಿರುವ ಪ್ರಕರಣವು ರಾಜಕೀಯ ವಲಯದಲ್ಲಿ ಚರ್ಚೆಗೆಗ್ರಾಸಗೆ ಗ್ರಾಸವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು