ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ಕಾಲೇಜಿನ ಸಭಾಂಗಣದಲ್ಲಿ ಇಂದು ನಡೆಯಿತು.
ಉಡುಪಿ ಶಾಸಕರು ಆಗಿರುವ ಕಾಲೇಜಿನ ಅಭಿವೃದ್ದಿ ಸಮಿತಿಯ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅವರು, ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಜಾನಪದ ತಜ್ಞ ಗಣನಾಥ್ ಎಕ್ಕಾರು, ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು