News Karnataka Kannada
Friday, March 29 2024
Cricket
ಉಡುಪಿ

ಕಿನ್ನಿಮುಲ್ಕಿಯಲ್ಲಿ ನೇಣಿಗೆ ಶರಣಾದ ತಾಯಿ ಮಗ: ಕಾರಣ ನಿಗೂಢ

ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಸಾಲಗಾರರ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.
Photo Credit : Pixabay

ಕಿನ್ನಿಮುಲ್ಕಿ: ಜೀವನದಲ್ಲಿ ಜಿಗುಪ್ಸೆಗೊಂಡ ತಾಯಿ ಮಗ ನೇಣಿಗೆ ಶರಣಾದ ಘಟನೆ ಕಿನ್ನಿಮುಲ್ಕಿಯ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ಬ್ರಹ್ಮಬೈದರ್ಕಳ ನಗರದ ಬಾಡಿಗೆಮನೆ ನಿವಾಸಿ 83ವರ್ಷದ ಎಡ್ಲಿನ್ ಡೆಲಿಶಾ ಅಮ್ಮನ್ನ ಹಾಗೂ ಅವರ ಮಗ 46ವರ್ಷದ ಸಬೆಸ್ಟಿನ್ ಅಮಿತ್ ಅಮ್ಮನ್ನ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇವರು ಮನೆಯಲ್ಲಿ ಇಬ್ಬರೇ ವಾಸ ಮಾಡಿಕೊಂಡಿದ್ದು, ವೈಯಕ್ತಿಕ ಕಾರಣ ದಿಂದ ಮನನೊಂದು ಸೆಬೆಸ್ಟಿನ್ ಮನೆಯ ಫ್ಯಾನಿಗೆ ಮತ್ತು ತಾಯಿ ಎಡ್ಲಿನ್ ಅದೇ ಕೊಠಡಿಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಎಸ್ಸೈ ಮಹೇಶ್ ಪಿ.ಎಂ., ಎಎಸ್ಸೈ ವಿಜಯ, ಹೆಡ್ ಕಾನ್ಸ್‌ಸ್ಟೇಬಲ್ ಮರಿಗೌಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಹಕರಿಸಿದರು. ಕಿನ್ನಿಮುಲ್ಕಿ ಕೃಷ್ಣಮೂರ್ತಿ ಆಚಾರ್ಯ ತಂಡದವರು ಸಹಕಾರ ನೀಡಿದರು.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು