ಉಡುಪಿ: ಪೆಟ್ರೋಲ್, ಡೀಸೆಲ್, ಆಟೋ ರಿಕ್ಷಾದ ಮೇಲಿನ ಬೆಲೆ ಏರಿಕೆ, ಇನ್ಶುರೆನ್ಸ್, ತೆರಿಗೆಗಳು ಐದು ಪಟ್ಟು ಹೆಚ್ಚಾಗಿದೆ. ಹೀಗಾಗಿ ಇಂದು ರಿಕ್ಷಾ ಚಾಲಕರಿಗಿಂದು ಒಂದು ಹೊತ್ತಿನ ಊಟಕ್ಕೂ ಕಷ್ಟಪಡುವಂತಾಗಿದೆ. ಬಡವರಿಗೆ ಬೆಂಗಾವಲಾಗಿ ಇರುವ ಪಕ್ಷ ಕಾಂಗ್ರೆಸ್ ಎಂದು ಉಡುಪಿ ಜಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಅವರು ಇಂದು ಮಣಿಪಾಲ ಆಟೋ ನಿಲ್ದಾಣದ ಬಳಿ ಆಟೋ ರಿಕ್ಷಾ ಚಾಲಕರೊಂದಿಗೆ ಮತ ಯಾಚಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಇಂದ್ರಾಳಿ 192 ರ ಬೂತ್ ಅಧ್ಯಕ್ಷ ರಾಘವೇಂದ್ರ ನಾಯಕ್ ಇಂದ್ರಾಳಿ, ರಿಕ್ಷಾ ಚಾಲಕರು ಮೊದಲಾದವರು ಉಪಸ್ಥಿತರಿದ್ದರು.