News Kannada
Monday, February 26 2024
ಉಡುಪಿ

ಕೊಚ್ಚಿ ಹೋದ ವಿದ್ಯಾರ್ಥಿಗಳು; ಇಬ್ಬರ ಮೃತದೇಹ ಪತ್ತೆ ಇನ್ನಿಬ್ಬರಿಗೆ ಶೋಧ

Photo Credit : By Author
ಕಾರವಾರ: ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲಾಗಿ ಅದರಲ್ಲಿ ಇಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಕುಮಟಾದ ಕಾಗಲ್ ಕಡಲತೀರದ ಬಳಿ ಇಂದು ನಡೆದಿದೆ.
ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ ಮೃತದೇಹ ಪತ್ತೆಯಾಗಿದ್ದು ತೇಜಸ್, ಕಿರಣ್‌ಕುಮಾರ್ ಎಂಬ ಇಬ್ಬರ ವಿದ್ಯಾರ್ಥಿಗಳು ಕಣ್ಮರೆಯಾಗಿದ್ದಾರೆ. ಈ ಇಬ್ಬರಿಗಾಗಿ ಇದೀಗ ಶೋಧಕಾರ್ಯ ಮುಂದುವರಿದಿದೆ.
ಬೆಂಗಳೂರಿನಿಂದ 87 ವಿದ್ಯಾರ್ಥಿಗಳು ಕುಮಟಾಗೆ ಪ್ರವಾಸಕ್ಕೆ ಬಂದಿದ್ದರು. ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದ ಎಲ್ಲರು ಅಲೆಯನ್ನು ಲೆಕ್ಕಿಸದೆ ಸಮುದ್ರದಲ್ಲಿ ಈಜಾಡಲು ಮುಂದಾದಗ‌ ಅಲೆಗೆ ಸಿಲುಕಿದ್ದ ನಾಲ್ವರು ಕೊಚ್ಚಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.‌
ಈಗಾಗಲೇ ಸ್ಥಳಕ್ಕೆ ತೆರಲಿರುವ ಕುಮಟಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಇನ್ನಿಬ್ಬರು ವಿದ್ಯಾರ್ಥಿಗಳಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು