News Karnataka Kannada
Thursday, April 25 2024
ಉಡುಪಿ

ಉಡುಪಿ: ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಶೋಕಿ

Udupi: A car was driven in a haphazard manner on the highway.
Photo Credit : News Kannada

ಉಡುಪಿ: ಮೂಡಬೆಟ್ಟು ಗ್ರಾಮದಿಂದ ಮೂಳೂರು ಗ್ರಾಮದವರೆಗೆ ರಾ.ಹೆ 66ರಲ್ಲಿ ಒಂದು ಜೀಪ್ ಹಾಗೂ ಮೂರು‌ ಕಾರುಗಳನ್ನು ಅದರ ಚಾಲಕರು ಹೆದ್ದಾರಿಯಲ್ಲಿ‌ ಸಾರ್ವಜನಿಕರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗಿರುವ ವಿಡಿಯೋ ವೈರಲ್ ಆಗಿದೆ.

KA 20 MD 6767 ನೋಂದಣಿ ಸಂಖ್ಯೆಯ ನೀಲಿ ಬಣ್ಣದ ಮಹೀಂದ್ರಾ ಜೀಪ್, KA 20 MH 9370 ನೋಂದಣಿ ಸಂಖ್ಯೆಯ ಕಪ್ಪು ಬಣ್ಣದ CRETA ಕಾರು, KA 20 ME 6996 ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಫಾರ್ಚುನರ್‌ ಕಾರು ಹಾಗೂ KA 20 MD 8078 ನೋಂದಣಿ ಸಂಖ್ಯೆ ಬಿಳಿ ಬಣ್ಣದ ಸ್ವಿಫ್ಟ್ ಕಾರನ್ನು ಅದರ ಚಾಲಕರು ಉಡುಪಿ- ಮಂಗಳೂರು ಕಡೆಗೆ ಅತೀ ವೇಗ ಹಾಗೂ ತೀವ್ರ ಅಜಾಗರೂಕತೆಯಿಂದ ಸಾರ್ವಜನಿಕರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ವಾಹನಗಳನ್ನು ಚಲಾಯಿಸಿಕೊಂಡು ಹೋಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ವಿಡಿಯೋ ಆಧಾರದಲ್ಲಿ ಆರೋಪಿಗಳ ವಿರುದ್ಧ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು