News Karnataka Kannada
Thursday, March 28 2024
Cricket
ಉಡುಪಿ

ಉಡುಪಿ: ಮೇ 10ರಂದು ಎಲ್ಲರೂ ತಪ್ಪದೆ ಮತದಾನ ಮಾಡಿ – ಜಿಲ್ಲಾಧಿಕಾರಿ ಕೂರ್ಮಾರಾವ್

All should cast their votes on May 10 without fail: Deputy Commissioner Koorma Rao
Photo Credit : News Kannada

ಉಡುಪಿ: ಮೇ 10 ರಂದು ಜಿಲ್ಲೆಯ ಎಲ್ಲ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರಿಗೆ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸಲು ನಡೆದ, ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದ ಅಂಗವಾಗಿ, ಉಡುಪಿಯ ಅಜ್ಜರಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರಜಾಪ್ರಭುತ್ವದ ಹಬ್ಬ – ಮೇ 10 ಮತದಾನ ಧ್ಯೇಯ ವಾಕ್ಯದ ಧ್ವಜರೋಹಣ ನೆರವೇರಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಮತದಾರರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ತಾವು ಮತದಾನ ಮಾಡಬೇಕಾದ ಮತಗಟ್ಟೆಯ ವಿಳಾಸವನ್ನು ಮೊದಲೇ ತಿಳಿದುಕೊಳ್ಳುವುದರಿಂದ ಮತದಾನ ದಿನದಂದು ಮತಗಟ್ಟೆ ಕುರಿತ ಯಾವುದೇ ಗೊಂದಲಗಳಿಗೆ ಒಳಗಾಗದೇ ಸುಲಭವಾಗಿ ಮತದಾನ ಮಾಡಲು ಸಾಧ್ಯವಿದೆ. ಈ ಮಾಹಿತಿಯನ್ನು ತಮ್ಮ ವ್ಯಾಪ್ತಿಯ ಬಿ.ಎಲ್.ಓ ಗಳ ಬಳಿ, ಚುನಾವಣಾ ಆಯೋಗದ ವೋಟರ್ ಹೆಲ್ಪ್ ಲೈನ್ ಆಪ್ ಮೂಲಕ ಅಥವಾ ಉಚಿತ ಸಹಾಯವಾಣಿ ಸಂಖ್ಯೆ 1950 ಕರೆ ಮಾಡಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸ್ವೀಪ್ ವತಿಯಿಂದ ಈಗಾಗಲೇ ಹಲವು ವಿನೂತನ ಕಾರ್ಯಕ್ರಮಗಳ ಮೂಲಕ, ಮತದಾನ ಕುರಿತು ಜಾಗೃತಿ ಮೂಡಿಸುತ್ತಿದ್ದು, ಮತದಾರರು ಯಾವುದೇ ಆಸೆ, ಆಮಿಷ, ಒತ್ತಡಗಳಿಗೆ ಒಳಗಾಗದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಶತಾಯುಷಿ ಮತದಾರರೂ ಸಹ ಉತ್ಸಾಹದಿಂದ ಮತದಾನ ಪ್ರಕ್ರಿಯೆಲ್ಲಿ ಭಾಗವಹಿಸುತ್ತಿದ್ದು, ಎಲ್ಲಾ ಯುವ ಮತದಾರರು ತಮ್ಮ ಮೊದಲ ಬಾರಿಯ ಮತವನ್ನು ತಪ್ಪದೇ ಚಲಾಯಿಸುವುವಂತೆ ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಡೆದ ಮತದಾನ ಪ್ರಮಾಣಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯುವಂತೆ ಮಾಡಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜಿಲ್ಲೆಯ ಕಾಲೇಜುಗಳಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲಾ ಯುವ ಜನತೆಯ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಲಾಗಿದೆ. ಯುವ ಜನತೆ ಸಂವಿಧಾನ ತಮಗೆ ನೀಡಿರುವ ಮತದಾನದ ಹಕ್ಕನ್ನು ಯಾವುದೇ ಆಮಿಷಗಳಿಗೆ ಬಲಿಯಾಗದೇ, ಸೂಕ್ತ ರೀತಿಯಲ್ಲಿ ಚಲಾಯಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಡಯಟ್‌ನ ಪ್ರಾಂಶುಪಾಲ ಗೋವಿಂದ ಮಡಿವಾಳ, ಉಪ ಪ್ರಾಂಶುಪಾಲ ಡಾ.ಅಶೋಕ್ ಕಾಮತ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ಉಡುಪಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ವಿಜಯಾ ಮತ್ತು ಶಾಲೆಯ ಶಿಕ್ಷಕ ವೃಂದ, ಬಿ.ಎಲ್.ಓ ಗಳು ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿನ ಮತದಾರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಬನ್ನಂಜೆಯಿಂದ ಅಜ್ಜರಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ವಿದ್ಯಾರ್ಥಿಗಳಿಂದ ಜಾಥಾ ನಡೆಯಿತು.
ಡಿಡಿಪಿಐ ಗಣಪತಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು