News Karnataka Kannada
Thursday, April 18 2024
Cricket
ಉಡುಪಿ

ಉಡುಪಿ: ತೆಂಕನಿಡಿಯೂರಿನಲ್ಲಿ ಬಿಜೆಪಿ “ಬೃಹತ್ ಸಾರ್ವಜನಿಕ ಸಭೆ”

Udupi: BJP holds 'massive public meeting' in Thenkanidiyur
Photo Credit : News Kannada

ಉಡುಪಿ: ಕರ್ನಾಟಕದ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿಯಾಗಿ ಬಿಜೆಪಿ ವತಿಯಿಂದ “ಬೃಹತ್ ಸಾರ್ವಜನಿಕ ಸಭೆ” ಇಂದು ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯೋಜಿಸಲಾಯಿತು.

ಸಭೆಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ಅವರು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದರ ಜೊತೆಗೆ ಕಳೆದ 5 ವರ್ಷಗಳಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ ಅವರಿಗೆ ಮತ ನೀಡಿ ಅತ್ಯಂತ ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ, ಉಪಾಧ್ಯಕ್ಷರಾದ ಅರುಣ್ ಜತ್ತನ್, ಬಡಾನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ್ ತಿಂಗಳಾಯ, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶರತ್ ಬೈಲಕೆರೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ವಿಜಯ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು