News Karnataka Kannada
Wednesday, April 24 2024
Cricket
ಉಡುಪಿ

ಉಡುಪಿ: ಮಹಿಳಾ ಕ್ರೀಡಾಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ,ಬಂಧನಕ್ಕೆ ಸಿಐಟಿಯು ಆಗ್ರಹ

CIT demands arrest in sexual harassment case against women athletes
Photo Credit : News Kannada

ಉಡುಪಿ: ಮಹಿಳಾ ಕ್ರೀಡಾಪಟುಗಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಮತ್ತು ಹಿಂಸೆಯನ್ನು ಖಂಡಿಸಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮತ್ತು ಹರ್ಯಾಣ ಸಚಿವ ಸಂದೀಪ್ ಸಿಂಗ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಿಐಟಿಯು ಉಡುಪಿ ಮತ್ತು ಬ್ರಹ್ಮಾವರ ಸಂಚಾಲನ ಸಮಿತಿ, ಜನವಾದಿ ಮಹಿಳಾ ಸಂಘಟನೆ ಉಡುಪಿ ತಾಲೂಕು ಸಮಿತಿ, ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘ ಉಡುಪಿ ತಾಲೂಕು ಸಮಿತಿ ಇದರ ನೇತೃತ್ವದಲ್ಲಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಇಂದು ಪ್ರತಿಭಟನೆ ನಡೆಸಲಾಯಿತು.

ಮಹಿಳಾ ಕ್ರೀಡಾಪಟುಗಳ ಮೇಲಿನ ಲೈಂಗಿಕ ಕಿರುಕುಳವನ್ನು ಖಂಡಿಸಿದ ಧರಣಿ ನಿರತರು, ಸಂಸದ ಬ್ರಿಜ್ ಭೂಷಣ್ ಸಿಂಗ್ ಹಾಗೂ ಸಚಿವ ಸಂದೀಪ್ ಸಿಂಗ್ ಅವರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಕೆ. ಶಂಕರ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕವಿರಾಜ್, ಸುರೇಶ್ ಕಲ್ಲಗಾರ, ರಾಮಕರ್ಕಡ, ಶಶಿಧರ್ ಗೊಲ್ಲ, ನಳಿನಿ, ಉಮೇಶ್ ಕುಂದರ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು