News Karnataka Kannada
Thursday, April 18 2024
Cricket
ಉಡುಪಿ

ಉಡುಪಿ: ಮೇ. 31ರಂದು ಶಾಲಾ ಪ್ರಾರಂಭೋತ್ಸವಕ್ಕೆ ಸಡಗರದ ಚಾಲನೆ

ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹಾಕುವ ಮೂಲಕ ಕಾಂಗ್ರೆಸ್ ಪಕ್ಷದ ದೇಶದ್ರೋಹಿ ಮುಖವಾಡ ಬಯಲಾಗಿದೆ, ಚುನಾವಣಾ ಆಯೋಗ ತಕ್ಷಣ ನಾಸೀರ್ ಹುಸೇನ್ ರಾಜ್ಯ ಸಭಾ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಉಡುಪಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Photo Credit : News Kannada

ಉಡುಪಿ: ಸರ್ಕಾರಿ ಶಾಲೆಗಳು ಹೊಸ ಶೈಕ್ಷಣಿಕ ವರ್ಷದೊಂದಿಗೆ ಮೇ 31ರ ಬುಧವಾರ ಪುನರಾರಂಭಗೊಳ್ಳಲಿದ್ದು, ಉಡುಪಿ ವಿಧಾನ ಸಭಾ ಕ್ಷೇತ್ರದ 72 ಸರ್ಕಾರಿ ಶಾಲೆಗಳು ಮಕ್ಕಳ ಸ್ವಾಗತಕ್ಕೆ ಸಜ್ಜಾಗಿವೆ.

ಉಡುಪಿ ನಗರದ ವಳಕಾಡು ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೆಳಿಗ್ಗೆ 9 ಗಂಟೆಗೆ ಶಾಸಕ ಯಶ್ ಪಾಲ್ ಸುವರ್ಣ ಆರಂಭೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ 10 ಗಂಟೆಗೆ ನಿಟ್ಟೂರು ಹನುಮಂತ ನಗರದ ಶಾಲೆ, 10.30 ಕ್ಕೆ ಬೋರ್ಡ್ ಹೈಸ್ಕೂಲ್ ಬ್ರಹ್ಮಾವರ, 11.30 ಗಂಟೆಗೆ ಕೆ.ಪಿ.ಎಸ್‍. ಶಾಲೆ, ಕೊಕ್ಕರ್ಣೆಯ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಗಳಲ್ಲಿ ಶಾಸಕರು ಭಾಗವಹಿಸಲಿದ್ದಾರೆ.

ಉಡುಪಿ ವಿಧಾನ ಸಭೆ ವ್ಯಾಪ್ತಿಯ ಎಲ್ಲಾ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕ ಸಮಿತಿಯ ಸದಸ್ಯರು, ಶಿಕ್ಷಣ ಪ್ರೇಮಿಗಳು ಸಂಬಂಧಿಸಿದ ಸಮೀಪದ ತಮ್ಮ ಶಾಲೆಗಳ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಂಭ್ರಮ ಹೆಚ್ಚಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.

ಶಾಸಕರು ಪ್ರವರ್ತಕರಾಗಿರುವ ಪುಷ್ಪಾನಂದ ಫೌಂಡೇಶನ್‍ ವತಿಯಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಡುಪಿ ವಿಧಾನ ಸಭಾ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಯ ಸುಮಾರು 12,000 ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರ ಕಛೇರಿ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು