News Kannada
Friday, February 23 2024
ಉಡುಪಿ

ಕಾಪು: ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ಭೇಟಿ

Union Minister Shobha Karandlaje visits rain-hit areas
Photo Credit : Twitter

ಕಾಪು: ಇಂದು ಕಾಪುವಿನ ಮೂಳೂರು-ತೊಟ್ಟಂನ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರಾವಳಿಯಲ್ಲಿ ಕಳೆದ ಹತ್ತು‌ ದಿನಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದ್ದು ಎಲ್ಲೆಡೆ ತೀವ್ರ ಹಾನಿಯುಂಟಾಗಿದೆ. ಸಮುದ್ರ ತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಡಲ್ಕೊರೆತ ತಡೆಗೆ ಶಾಶ್ವತ ತಡೆಗೋಡೆ ರಚನೆಯೇ ಪರಿಹಾರವಾಗಿದೆ ಎಂದರು.

ಕಡಲ್ಕೊರೆತ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಕೆಲವೇ ವರ್ಷಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣ ಆಗಲಿದೆ. ಮೂಳೂರಿನ ಕಡಲ್ಕೊರೆತ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ತುರ್ತು ತಡೆಗೋಡೆ ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಸಹಾಯಕ ಕಮಿಷನರ್ ರಾಜು ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವ ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಪುರಸಭೆ ಸದಸ್ಯರಾದ ಸತೀಶ್ಚಂದ್ರ, ಮೊಹಮ್ಮದ್ ಆಸಿಫ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಕೇಸರಿ ಯುವರಾಜ್ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು