News Kannada
Monday, December 05 2022

ಉತ್ತರಕನ್ನಡ

ಭಟ್ಕಳದಲ್ಲಿ ಭಾರೀ ಮಳೆಗೆ ಚೌಥನಿ ನದಿ ಸುತ್ತಮುತ್ತಲಿನ ಗ್ರಾಮ ಜಲಾವೃತ

Photo Credit :

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆ ಸುರಿಯುತ್ತಿದ್ದು ಭಟ್ಕಳದಲ್ಲಿ ರವಿವಾರ ಎಡಬಿಡದ ಮಳೆಯಿಂದ ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ಇಲ್ಲಿನ ಶಂಸುದ್ದೀನ್ ಸರ್ಕಲ್ ನೀರಿನಿಂದ ಜಲಾವೃತಗೊಂಡಿದೆ.

ಶನಿವಾರ ತಡರಾತ್ರಿಯಿಂದಲೇ ಸುರಿಯುತ್ತಿರುವ ಮಳೆಯಿಂದ ಭಟ್ಕಳದ ಚೌಥನಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ವಿವಿಧ ರಸ್ತೆಗಳು, ಚೌಥನಿ ಗ್ರಾಮ ಸಂಪೂರ್ಣ ಜಲಾವೃತವಾಗಿವೆ.

ಭಟ್ಕಳದ ಶಂಸುದ್ದೀನ್ ವೃತ್ತದಲ್ಲಿ ನೀರು ಹರಿಯದೇ ಜಲಾವೃತಗೊಂಡಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಅಸಮರ್ಪಕವಾಗಿರುವ ಕಾರಣ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ತಾಲೂಕಿನ ಗ್ರಾಮೀಣ ಭಾಗದಲ್ಲೂ ಮಳೆ ಮುಂದುವರಿದಿದೆ. ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದ ಹಲವು ಕಡೆ ರಸ್ತೆಗಳು ನೀರಿನಿಂದ ಜಲಾವೃತಗೊಂಡಿದ್ದು ವಾಹನ ಸಂಚಾರಿಗಳಿಗೆ ತೊಂದರೆಯಾಗುತ್ತಿದೆ.

See also  ಕನ್ಯಾಡಿ ಶ್ರೀಗಳ ಪಾದಪೂಜೆ ಮಾಡಿದ ಸಚಿವ ಶಿವರಾಮ ಹೆಬ್ಬಾರ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು