News Kannada
Sunday, September 25 2022

ಉತ್ತರಕನ್ನಡ

ಕಾರವಾರ: ಮಗನಿಗೆ ಸಾಲ ನೀಡಬೇಡಿ ಎಂದು ಪ್ರಕಟಣೆ ಹೊರಡಿಸಿದ ಮಾಜಿ ಶಾಸಕ - 1 min read

Karwar: Ex-MLA issues notice not to give loan to his son
Photo Credit :

ಕಾರವಾರ: ಮಾಜಿ ಶಾಸಕ ಹಾಗೂ ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ವಿ.ಎಸ್.ಪಾಟೀಲ್ ಅವರು ತಮ್ಮ ಮಗನ ವಿರುದ್ಧವೇ ಪ್ರಕಟಣೆ ಹೊರಡಿಸಿ ಗಮನ ಸೆಳೆದಿದ್ದಾರೆ.

ತನ್ನ ಹೆಸರನ್ನು ಹೇಳಿ ಸಾರ್ವಜನಿಕರಿಗೆ ಸುಳ್ಳು ಭರವಸೆ ಕೊಟ್ಟು ನನ್ನ ಮಗ ಸಾಲ  ತೆಗೆದುಕೊಳ್ಳುತ್ತಿದ್ದಾನೆ. ಈತನಿಗೆ ಯಾರೂ ಸಾಲ ಕೊಡಬೇಡಿ ಎಂದು ಪ್ರಕಟಣೆ ನೀಡುವ ಮೂಲಕ ಮನವಿ ಮಾಡಿದ್ದಾರೆ.

ಈ ಕುರಿತು ತಮ್ಮ ಲೆಟರ್ ಹೆಡ್ ನಲ್ಲಿಯೇ ಪ್ರಕಟಣೆ ನೀಡಿರುವ ಅವರು, ನನ್ನ ಮಗ ಬಾಪೂಗೌಡ ಪಾಟೀಲ್ ದುಶ್ಚಟಕ್ಕೆ ಬಲಿಯಾಗಿ ತನ್ನ ಎಲ್ಲ ಆಸ್ತಿಯನ್ನೂ ಹಾಳು ಮಾಡಿಕೊಂಡಿದ್ದಾನೆ. ಅವನ ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲದಿದ್ದರೂ ಮುಂಗಡ ಚೆಕ್ ಕೊಟ್ಟು ಸಾಲ ತೆಗೆದುಕೊಳ್ಳುತ್ತಿದ್ದಾನೆ. ದಯವಿಟ್ಟು ಯಾರೂ ನನ್ನ ಮಗನಿಗೆ ಸಾಲ ಕೊಡಬೇಡಿ ಎಂದು ಮಾಜಿ ಶಾಸಕ ವಿ.ಎಸ್‌.ಪಾಟೀಲ ಅವರು ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ ಲೆಟರ್​ಹೆಡ್​ ಮೂಲಕ ಮನವಿ ಮಾಡಿದ್ದಾರೆ.

See also  ಬಂಟ್ವಾಳ: ನೇತ್ರಾವತಿ ನದಿ ನೀರಿನಮಟ್ಟದಲ್ಲಿ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು