News Kannada
Friday, September 30 2022

ಉತ್ತರಕನ್ನಡ

ಕಾರವಾರ: ದೇವಳಮಕ್ಕಿಯಲ್ಲಿ ಗಮನ ಸೆಳೆದ ಕೆಸರು ಗದ್ದೆ ಕ್ರೀಡಾಕೂಟ - 1 min read

Karwar: The mud field sports meet that attracted attention at Devalamakki
Photo Credit : By Author

ಕಾರವಾರ: ತಾಂತ್ರಿಕತೆ, ವೈಜ್ಞಾನಿಕತೆ ಬೆಳೆದಂತೆ ಗ್ರಾಮೀಣ ಕ್ರೀಡೆಗಳು ಮರೆಯಾಗುತ್ತಿವೆ. ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸುವಂತೆ ಹಾಗೂ ಗ್ರಾಮೀಣ ಜನರ ಕ್ರೀಡೆಯಲ್ಲಿ ಒಲವು ಕಡಿಮೆ ಆಗಬಾರದು ಎಂಬ ಕಾರಣದಿಂದ ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮದಲ್ಲಿ ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜಿಸಿ ಗ್ರಾಮೀಣ ಕ್ರೀಡೆಯನ್ನು ಉಳಿಸಲು ಪ್ರಯತ್ನಿಸಿದ್ದಾರೆ.

ಈ ಕ್ರೀಡಾಕೂಟವು ಗ್ರಾಮೀಣ ಪ್ರದೇಶವಾದ ಕೇರವಡಿ, ದೇವಳಮಕ್ಕಿ, ವೈಲವಾಡ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿತ್ತು. ಅದರಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಓಟ ಮತ್ತು ಚಮಚ-ಲಿಂಬೆಹಣ್ಣು ನಡಿಗೆ ಸ್ವರ್ಧೆ, ಪುರಷರಿಗೆ ಓಟ, ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ.

ಮಹಿಳೆಯರಿಗಾಗಿ ಓಟ, ಚಮಚ-ಲಿಂಬೆಹಣ್ಣು ನಡಿಗೆ ಸ್ವರ್ಧೆ, ಥ್ರೋ ಬಾಲ್ ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆ ಏರ್ಪಡಿಸಲಾಗಿತ್ತು ವಿಶೇಷವಾಗಿ ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿ ಕ್ರೀಡಾಭಿಮಾನಿ ಮೆರೆದರು ಅಷ್ಟೇ ಅಲ್ಲದೆ 60 ವರ್ಷ ಮೇಲ್ಪಟ್ಟ ವೃದ್ಧರು ಸಹ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸೈ ಎನಿಸಿಕೊಂಡಿದ್ದರು.

ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ದೇವಳಮಕ್ಕಿ ತಂಡ, ವಾಲಿಬಾಲ್ ಕ್ರೀಡೆಯಲ್ಲಿ ನಿವಳಿ ಗ್ರಾಮ ಅದೇ ರೀತಿ ಮಹಿಳೆಯರ ಥ್ರೋ ಬಾಲ್ ಪಂದ್ಯದಲ್ಲಿ ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ತಂಡ, ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಆಶಾ ಕಾರ್ಯಕರ್ತೆಯರ ತಂಡವು ಚಾಂಪಿಯನ್ ಪಟ್ಟ ಪಡೆದುಕೊಂಡಿತ್ತು.

ಕೆಸರುಗದ್ದೆ ಕ್ರೀಡಾಕೂಟದ ಬಹುಮಾನದ ವಿತರಣೆ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಲ್ಲಾಪುರ ಪೋಲಿಸ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಿದ್ದಪಾ ಗುದ್ದಿ, ಕೈಂ ಸಬ್ ಇನ್ಸ್ಪೆಕ್ಟರ್ ಪ್ರತಾಪ್, ದೇವಳಮಕ್ಕಿ ಭಾಗದ ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ರಾಥೋಡ್, ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವನಶ್ರೀ ಕುಲಕರ್ಣಿ, ದೇವಳಮಕ್ಕಿ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಗೌಡ, ದೇವಳಮಕ್ಕಿ ಬಾಯ್ಸ್ ಸದಸ್ಯರಾದ ಸುನಿಲ್ ಶೇಟ್, ಮರಿ ಗೌಡ,ಅಗ್ನೇಲ್ ಡಿಸೋಜಾ, ಗುರುದಾಸ್ ಪಾಯ್ದೆ, ದೀಪಕ ಹಳದೀಪುರ ಮತ್ತು ಗ್ರಾಮಸ್ಥರು ಇದ್ದರು.

See also  ನೆರೆಯಿಂದ ಮಳೆ ಕಳೆದುಕೊಂಡವರಿಗೆ 10 ಸಾವಿರ ಪರಿಹಾರ: ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು