ಕಾರವಾರ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಒಂದು ವಾರದ ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಪ್ರಾಂಶುಪಾಲ ಡಾ. ವಿಶ್ವನಾಥ ಎಂ. ನಾಯ್ಕ ಅವರು ವಿದ್ಯಾರ್ಥಿನಿಯರಲ್ಲಿ ಸ್ಮರ್ಧಾತ್ಮಕ ಮನೋಭಾವ ಹಾಗೂ ಒಗ್ಗಟ್ಟನ್ನು ಬೆಳೆಸಲು ಇಂತಹ ಕಾರ್ಯಕ್ರಮಗಳು ಅತ್ಯಂತ ಅವಶ್ಯಕವಾಗಿದ್ದು ಕಾಲೇಜು ವಿದ್ಯಾರ್ಥಿನಿಯರ ಸಮತೋಮುಖ ಅಭಿವೃದ್ಧಿಗೆ ಯಾವಾಗಲೂ ಕಾರ್ಯತತ್ಪರವಾಗಿರುತ್ತದೆ ಎಂದರು.
ಹಿರಿಯ ಪ್ರಾಧ್ಯಾಪಕರಾದ ಡಾ. ವಿ. ಜಿ. ಗಣೇಶ ಅವರು ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಧಾನ ಕಾರ್ಯದರ್ಶಿ ರಶ್ಮಿ ಜಿ ತಾಂಡೇಲ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿ ಪ್ರತಿಷ್ಟಾ ಶೇಟ್ ಇದ್ದರು.
ಸಹನಾ ಗೌಡ ಸ್ವಾಗತಿಸಿದರು, ಸಹನಾ ಸೈಲ್ ವಂದನಾರ್ಪಣೆ ಮಾಡಿದರು. ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ಹಾಗೂ ಭೋದಕ ವರ್ಗದವರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.