News Kannada
Saturday, October 08 2022

ಉತ್ತರಕನ್ನಡ

ಕಾರವಾರ: ದ್ವಿವರ್ಣದ ಹೊಸ ಪ್ರಜಾತಿಯ ಏಡಿ ಪತ್ತೆ - 1 min read

Karwar: A new double-coloured species of crab has been discovered
Photo Credit :

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಘಟಿಯಾನ ಪ್ರಭೇದದ ಹೊಸ ಜಾತಿಯ ಸಿಹಿನೀರಿನ ಏಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ನಿಸರ್ಗ ತಜ್ಞರು ಯಲ್ಲಾಪುರದಲ್ಲಿ ಪತ್ತೆ ಹಚ್ಚಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಅರಣ್ಯ ಇಲಾಖೆಯ ಸಿಬ್ಬಂದಿ ಪರಶುರಾಮ ಭಜಂತ್ರಿ, ನಿಸರ್ಗ ತಜ್ಞರಾದ ಗೋಪಾಲಕೃಷ್ಣ ಹೆಗಡೆ, ಸಮೀರಕುಮಾರ ಪಾಟಿ ಮತ್ತು ತೇಜಸ್ ಥಾಕರೆ ತಂಡದವರು ಭಾರತದ ಮಧ್ಯ ಪಶ್ವಿಮ ಘಟ್ಟದಲ್ಲಿ ಘಟಿಯಾನ ಪ್ರಭೇದದ ಹೊಸ ಜಾತಿಯ ಸಿಹಿನೀರಿನ ಏಡಿಯನ್ನು ಪತ್ತೆಹಚ್ಚಿದ್ದಾರೆ ಎಂದು ತಿಳಿಸಿದ್ದಾರೆ.

ವಿಜ್ಞಾನಿಗಳ ಅಧ್ಯಯನದ ಪ್ರಕಾರ ವಿಶ್ವದಲ್ಲಿ ಇದುವರೆಗೂ ೪೦೦೦ ಜಾತಿಯ ಏಡಿಗಳಿವೆ ಎಂದು ಅಂದಾಜಿಸಲಾಗಿದೆ. ಭಾರತದಲ್ಲಿ ೧೨೫ ವಿವಿಧ ಜಾತಿಯ ಏಡಿಗಳನ್ನು ಗುರುತಿಸಲಾಗಿದೆ. ಘಟಿಯಾನ ಪ್ರಭೇದದಲ್ಲಿ ಇಲ್ಲಿಯವರೆಗೆ ೧೩ ವಿವಿಧ ಜಾತಿಯ ಸಿಹಿ ನೀರಿನ ಏಡಿಗಳನ್ನು ಗುರುತಿಸಲಾಗಿದ್ದು ‘ಘಟಿಯಾನ ದ್ವಿವರ್ಣ೧೪ನೇ ಸಿಹಿನೀರಿನ ಏಡಿಯಾಗಿದೆ. ವಿಶ್ವದಲ್ಲಿಯೇ ಜೀವವೈವಿಧ್ಯದ ಹಾಟ್ ಸ್ಪಾಟ್ ಎಂಬ ಖ್ಯಾತಿ ಹೊಂದಿರುವ ಭಾರತದ ಪಶ್ಚಿಮ ಘಟ್ಟಗಳಲ್ಲಿ ಇದುವರೆಗೆ ಒಟ್ಟು ೭೫ ವಿವಿಧ ಜಾತಿಯ ಏಡಿಗಳನ್ನು ಗುರುತಿಸಲಾಗಿತ್ತು. ಇದೀಗ ಸ್ವಾತಂತ್ರö್ಯ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಪಶ್ಚಿಮ ಘಟ್ಟದ ಪ್ರಧೇಶದಲ್ಲಿ ೭೫ನೇ ಏಡಿ ಪತ್ತೆಹಚ್ಚಿರುವದು ಹೆಮ್ಮೆಯ ಸಂಗತಿಯಾಗಿದೆ ಎಂದು ಇಲಾಖೆ ಖುಷಿ ವ್ಯಕ್ತ ಪಡಿಸಿದೆ. ಘಟಿಯಾನ ಪ್ರಭೇದ ಏಡಿಗಳು ವಿಶೇಷವಾಗಿ ವರ್ಣಗಳಿಂದ ಕೂಡಿದ್ದು ಆಕರ್ಷಣೀಯವಾಗಿರುತ್ತವೆ. ಈಗ ಪತ್ತೆಯಾಗಿರುವ ಏಡಿಯ ದೆಹದ ವರ್ಣ ಬಿಳಿ ಮತ್ತು ಕಾಲುಗಳು ಚಾಕಲೇಟ್‌ವರ್ಣಗಳಿಂದ ಕೂಡಿರುವದರಿಂದ ‘ದ್ವಿವರ್ಣ ಎಂದು ನಾಮಕರಣ ಮಾಡಲಾಗಿದೆ ಎನ್ನುತ್ತಾರೆ ತಂಡದವರು.ಪಶ್ಚಿಮ ಘಟ್ಟದ ಬಂಡೆಗಳಲ್ಲಿನ ಅಡಿಯಲ್ಲಿರುವ ರಂದ್ರಗಳಲ್ಲಿ ಈ ಏಡಿಗಳು ವಾಸವಾಗಿರುತ್ತವೆ. ಇವು ಸಣ್ಣಪುಟ್ಟ ಹುಳುಗಳು ಮತ್ತು ಪಾಚಿಗಳನ್ನು ಆಹಾರವಾಗಿ ಸೇವಿಸುತ್ತವೆ.

ಜೀವವೈವಿಧ್ಯ ಸಂಶೋಧಕರಾದ ಮಂಜುನಾಥ ಎಸ್. ನಾಯಕ ಅವರು ಈ ಬಗ್ಗೆ ತಮ್ಮ ವಿಚಾರವನ್ನು ಹಂಚಿಕೊಳ್ಳುತ್ತ ಆಹಾರ ಸರಪಳಿಯಲ್ಲಿ ಏಡಿಗಳು ಮಹತ್ವದ ಪಾತ್ರ ವಹಿಸುವದರ ಮೂಲಕ ಪರಿಸರ ವವ್ಯಸ್ಥೆಯ ಸಮತೋಲನವನ್ನು ಕಾಯ್ದುಕೊಳ್ಳಲು ಸಹಾಯವಾಗುತ್ತವೆ. ಆವಾಸ ಸ್ಥಾನ ನಾಶದಿಂದಾಗಿ ಹಲವಾರು ಪ್ರಭೇದದ ಜೀವಿಗಳು ವಿನಾಶದಂಚು ತಲುಪುತ್ತಿವೆ ಇವುಗಳ ಉಳಿವಿಗೆ ಪಶ್ಚಿಮಘಟ್ಟದ ಸಂರಕ್ಷಣೆ ಆಗಬೇಕು ಎನ್ನುತ್ತಾರೆ. ಪಶ್ಚಿಮ ಘಟ್ಟವು ವಿಶಿಷ್ಟವಾದ ಅಸಂಖ್ಯಾತ ಜೀವರಾಶಿ ಹೊಂದುವುದರ ಮೂಲಕ ವಿಶ್ವದ ಪ್ರಖ್ಯಾತ ಜೀವವೈವಿಧ್ಯ ತಾಣವಾಗಿದ್ದು ಇನ್ನು ಹೆಚ್ಚಿನ ಸಂಶೋಧನೆಗಳನ್ನು ಕೈಗೊಳ್ಳಲಾಗಿದೆ. ಈ ಕಾರ್ಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ತೊಡಗಿದ್ದು ಈ ಸಂಶೋಧನೆಯು ಇಲಾಖೆಯ ಸಿಬ್ಬಂದಿಗೆ ಪ್ರೇರಣೆಯಾಗಿದೆ ಎಂದು ಹೇಳಿಕೆಯಲ್ಲಿ ಸಂತಸ ವ್ಯಕ್ತಪಡಿಸಿದೆ. ಇನ್ನು ಈ ಸಂಶೋಧನಾ ತಂಡದ ಸಾಧನೆಗೆ ಡಿ.ಸಿ.ಎಫ್. ಎಸ್. ಜಿ. ಹೆಗಡೆ, ಯಲ್ಲಾಪುರ ಎ.ಸಿ.ಎಫ್. ಹಿಮವತಿ ಭಟ್ಟ, ಕಾಳಿ ಟೈಗರ್ ರಿಸರ್ವ್ನ ಡಿ.ಸಿ.ಎಫ್. ಮರಿಯಾ ಕ್ರಿಸ್ಟ್ ರಾಜು, ಅಣಶಿ ಎ.ಸಿ.ಎಫ್. ಶಿವಾನಂದ ತೊಡಕರ ಅವರು ಅಭಿನಂದಿಸಿದ್ದಾರೆ.

See also  ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರೋತ್ಸವ ಆಚರಣೆಗೆ ಭೂಮಿ ಹಕ್ಕು ಹೋರಾಟಗಾರರ ನಿರ್ಧಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು