News Kannada
Wednesday, October 04 2023
ಉತ್ತರಕನ್ನಡ

ಕಾರವಾರ: ಅಂಗಡಿ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ

Karwar: Deputy Commissioner's move to the village in Angadi grama
Photo Credit :

ಕಾರವಾರ: ಆಯುಷ್ಮಾನ್ ಭಾರತ್ ಕಾರ್ಡ್ ಪಡೆಯುವ ಮೂಲಕ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ೫ ಲಕ್ಷ ರೂ. ವರೆಗೆ ಅರ್ಹರು ಉಚಿತ ಚಿಕಿತ್ಸೆ ಪಡೆಯಬಹುದಾಗಿದ್ದು, ಸಾರ್ವಜನಿಕರು ಈ ಯೋಜನೆಯ ಲಾಭ ಪಡೆಯಲು ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಬೇಕು ಎಂದುಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಎಂ.ಪಿ ಹೇಳಿದರು.

ಕಾರವಾರ ತಾಲೂಕಿನ ಸಾವಂತವಾಡ ಹೋಬಳಿಯ ಮುಡಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗಡಿ ಗ್ರಾಮದ ಶಿವನಾಥ ದೇವಸ್ಥಾನ ಸಭಾಭವನದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಯಲ್ಲಿ ಕಂದಾಯ ಹಾಗೂ ಇತರೆ ಇಲಾಖೆಯ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಗ್ರಾಮಒನ್ ಕೇಂದ್ರಗಳ ಮೂಲಕ ಆಯುಷ್ಮಾನ್ ಕಾರ್ಡ್ ಪಡೆದುಕೊಳ್ಳಬೇಕು. ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಈ ಯೋಜನೆಯು ಶೇ. ೧೦೦ ಯಶಸ್ವಿಯಾಗಲು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಮತ್ತು ಸಹಾಯ ನೀಡಬೇಕು. ಆರೋಗ್ಯ ಇಲಾಖೆಯ ಆರೋಗ್ಯ ಮಿತ್ರರ ಸಹಾಯದಿಂದ ೫ ಲಕ್ಷದವರೆಗಿನ ಚಿಕಿತ್ಸೆಗೆ ಕ್ಲೇಮ್ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಬಳಿಕ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಶಿಕ್ಷಣ ಇಲಾಖೆ, ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ವಿದ್ಯುತ್ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ನಿರ್ಮಿತಿ ಕೇಂದ್ರ ಹಾಗೂ ಇನ್ನಿತರ ಇಲಾಖೆಗಳ ಯೋಜನೆಗಳಲ್ಲಾದ ಸಮಸ್ಯೆಗಳನ್ನು ಆಲಿಸಿ, ರಸ್ತೆ ಸಂಪರ್ಕ, ವಿದ್ಯುತ್ ಕಂಬ ಮತ್ತು ತಂತಿ ದುರಸ್ತಿ, ಆಂಬುಲೆನ್ಸ್ ಸೇವೆ ಮತ್ತು ವೈದ್ಯರ ಕೊರತೆ, ಸಮುದಾಯ ಆರೋಗ್ಯ ಕೇಂದ್ರ ಮಂಜೂರಿ, ಬಸ್ ಸಂಚಾರ ವ್ಯವಸ್ಥೆ, ಶಿಕ್ಷಕರ ಕೊರತೆ, ಜಮೀನು ವ್ಯಾಜ್ಯಗಳ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಹಳಿಯಾಳದಲ್ಲಿ ಗೋಶಾಲೆ ನಿರ್ಮಾಣವಾಗಿದ್ದು, ಕಾರವಾರದ ಮಾಜಾಳಿಯಲ್ಲಿ ಗೋಶಾಲೆ ನಿರ್ಮಾಣ ಮಾಡುವ ಮೂಲಕ ಗೋವುಗಳ ಪಾಲನೆ ಮತ್ತು ಜನಸಾಮಾನ್ಯರು ಗೋವುಗಳಿಂದ ಪಡುತ್ತಿರುವ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಸುಕನ್ಯಾ ಸಮೃದ್ಧಿ ಯೋಜನೆಯ ಫಲಾನುಭವಿಯಾದ ೮ ಮಕ್ಕಳಿಗೆ ಪಾಸ್ ಬುಕ್ ವಿತರಿಸಲಾಯಿತು. ಗ್ರಾಪಂ ವ್ಯಾಪ್ತಿಯಲ್ಲಿ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಶೇ.೧೦೦ ಜೋಡಿಸಲು(ಲಿಂಕ್) ಶ್ರಮವಹಿಸಿದ ಬಿ.ಎಲ್.ಒ ಗಳಾದ ಹೇಮಾ ಪಾಯದೇ ಮತ್ತು ಶ್ರೀಕಾಂತ ಹೆಗಡೆ ಜಿಲ್ಲಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕಾರವಾರ ತಾಲೂಕು ತಹಶೀಲ್ದಾರ್ ಎನ್.ಎಫ್. ನೊರೋನ್ಹಾ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಆನಂದ ಬಾಲಪ್ಪಗೋಳ, ಮುಡಿಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಧಿಕಾರಿಗಳು, ಸದಸ್ಯರು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.

See also  ಮಂಗಳೂರು: ಗೋಹಂತಕರ ಆಸ್ತಿ ಮುಟ್ಟುಗೋಲಿಗೆ ಶಾಸಕ ಕಾಮತ್ ಖಡಕ್ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು