News Kannada
Thursday, March 23 2023

ಉತ್ತರಕನ್ನಡ

ಕಾರವಾರ: ಸ್ರ್ತೀ ಸ್ವಾತಂತ್ರ್ಯ, ಸಮಾನತೆಗಾಗಿ ಜೀವನ ಪರ್ಯಂತ ಶ್ರಮಿಸಿದ ಬ್ರಹ್ಮಶ್ರೀ ನಾರಾಯಣ ಗುರು

Karwar: Brahmasree Narayana Guru, who worked for freedom and equality throughout his life, worked tirelessly.
Photo Credit : By Author

ಕಾರವಾರ: ಸಾಮಾಜಿಕ ಅಸ್ಪೃಶ್ಯತೆ, ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ನಡೆಯುವ ಮೂಢ ಆಚರಣೆಗಳು ಮತ್ತು ಕಂದಾಚಾರಗಳನ್ನು ಹೋಗಲಾಡಿಸಲು ಮತ್ತು ಸ್ತ್ರೀ ಸ್ವಾತಂತ್ರ್ಯ, ಸಮಾನತೆಗಾಗಿ ಜೀವನಪರ್ಯಂತ ಶ್ರಮಿಸಿದ ದಾರ್ಶನಿಕರೆಂದರೆ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಕಾರವಾರ ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ಹೇಳಿದರು.

ತಾಲೂಕಾಡಳಿತ, ತಾಲೂಕು ಪಂಚಾಯತ್ ಕಾರವಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ತಾಲೂಕು ಪಂಚಾಯತ ಸಭಾಭವನದಲ್ಲಿ ಜರುಗಿದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಾರಾಯಣ ಗುರುಗಳು ಜಾತಿ, ಲಿಂಗ, ಧರ್ಮ ಆಧಾರದ ತಾರತಮ್ಯದ ವಿರುದ್ಧ ಜೀವನ ಪರ್ಯಂತ ಹೋರಾಡಿದ್ದಾರೆ. ಸ್ತ್ರೀ ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದ್ದಾರೆ.

ಅಂತವರ ಜೀವನ ಚಿತ್ರಣವನ್ನು ನಾವು ತಿಳಿದುಕೊಳ್ಳಬೇಕು. ಮುಂದಿನ ಯುವ ಪೀಳಿಗೆಗೂ ಈ ಕುರಿತು ತಿಳಿಸಬೇಕಾದುದು ನಮ್ಮ ಜವಾಬ್ದಾರಿಯಾಗಿದೆ. ಮಕ್ಕಳನ್ನು ಸುಶಿಕ್ಷಿತರನ್ನಾಗಿಸುವುದರ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವುದು ಹಿರಿಯರ ಕರ್ತವ್ಯವಾಗಿದೆ ಎಂದು ತಿಳಿಸಿದರು.ಉಪನ್ಯಾಸಕ ಸತೀಶ್ ನಾಯ್ಕ ಮಾತನಾಡಿ, ಜಾತಿ ವ್ಯವಸ್ಥೆ, ಧಾರ್ಮಿಕ ಮೂಢನಂಬಿಕೆ ವಿರುದ್ಧ ಮತ್ತು ಸ್ತ್ರೀ ಸ್ವಾತಂತ್ರ್ಯ,, ಗೌರವ, ಸಮಾನತೆಗಾಗಿ ನಾರಾಯಣ ಗುರುಗಳುಧ್ವನಿ ಎತ್ತಿದ್ದಾರೆ.

ಅಸ್ಪೃಶ್ಯತೆಯನ್ನು ವಿರೋಧಿಸಿ ಸಾಮಾಜಿಕ ಹಾಗೂ ಧಾರ್ಮಿಕ ಕಂದಾಚಾರ, ಮೂಢ ನಂಬಿಕೆ ಆಚರಣೆಗಳನ್ನು ಬದಲಾಯಿಸಲು ಕ್ರಾಂತಿಯನ್ನು ಮಾಡಿದರು. ಒಂದೇ ಮತ, ಒಂದೇ ಜಾತಿ, ಒಂದೇ ದೇವರು ಎಂದು ಹೇಳಿದ ಅವರು ಎಲ್ಲರ ಆತ್ಮದಲ್ಲೂ ಪರಮಾತ್ಮನಿದ್ದಾನೆ ಎಂದು ಸರ್ವಧರ್ಮ ಸಮನ್ವಯತೆಯನ್ನು ಸಾರಿದ್ದಾರೆ ಎಂದು ತಿಳಿಸಿದರು. ಯೋಗದಲ್ಲಿ ಪತಂಜಲಿ, ಅಹಿಂಸೆಯಲ್ಲಿ ಭಗವಾನ್ ಬುದ್ಧ, ಮಾನವೀಯತೆಯಲ್ಲಿ ಏಸು ಇದ್ದಂತೆ ನಾರಾಯಣ ಗುರುಗಳು ಎಂದು ಅನಿಬೆಸೆಂಟ್ ಹೇಳಿದ ಮಾತಿನಂತೆ ಅವರು ಯೋಗ ಗುರು ಹಾಗೂ ವೈದ್ಯ ವೃತ್ತಿಯಲ್ಲಿ ನಿರತರಾದಂತವರು.

ವಿದ್ಯೆಯಿಂದ ವಿವೇಕಿಗಳಾಗಿ, ಸಂಘಟಿತರಾಗಿ, ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಲು ಗುಡಿ ಕೈಗಾರಿಕೆ ಸ್ಥಾಪಿಸಿ ತನ್ಮೂಲಕ ಸಾಮಾಜಿಕ ಬದಲಾವಣೆಗೆ ಕಾರಣೀಭೂತರಾಗಿ ಎಂದು ಹೇಳಿದ ಅವರ ವಿಚಾರಧಾರೆಗಳು ಎಂದಿಗೂ ಪ್ರಸ್ತುತವಾಗಿವೆ. ಅಂತಹಯೋಗಿಗಳ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಶ್ರಮಿಸೋಣವೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆ ಉಪಾಧ್ಯಕ್ಷ ಪ್ರಕಾಶ ನಾಯ್ಕ ವಹಿಸಿದ್ದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಜಾತಾ ತಾಮ್ಸೆ, ಗ್ರೇಡ್೨ ತಹಸೀಲ್ದಾರ್ ಶ್ರೀದೇವಿ ಭಟ್, ನಾಮಧಾರಿ ಸಮುದಾಯದ ಮುಖಂಡ ಎನ್. ಜಿ. ನಾಯಕ್, ರಾಮಾ ನಾಯ್ಕ, ಸುನೀಲ ಸೋನಿ, ಶಿಕ್ಷಕ ಗಣೇಶ್ ಬಿಸ್ಟಣ್ಣನವರ, ತಾಲೂಕು ಪಂಚಾಯತ್ ಸಿಬ್ಬಂದಿ, ನಗರಸಭೆ ಸದಸ್ಯರು ಹಾಗೂ ಅಸ್ನೋಟಿ ಶಿವಾಜಿ ವಿದ್ಯಾಮಂದಿರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

See also  ಮಂಗಳೂರು: ಕಳೆದ ಎರಡು ವಾರಗಳಿಂದ ಅಬ್ಬರಿಸಿದ ಮಳೆ ಇದೀಗ ಕೊಂಚ ಕಡಿಮೆಯಾಗಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು