News Kannada
Monday, October 03 2022

ಉತ್ತರಕನ್ನಡ

ಕಾರವಾರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಮ್ಮತಿ, ಬಹುದಿನಗಳ ಬೇಡಿಕೆ ಈಡೇರಿದೆ- ರೂಪಾಲಿ ನಾಯ್ಕ - 1 min read

Photo Credit : By Author

ಕಾರವಾರ: ಕಾರವಾರದ ಮೆಡಿಕಲ್ ಕಾಲೇಜ ಉನ್ನತ ದರ್ಜೆಗೇರಿಸಿ ಅದರಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇರಬೇಕಾದ ಎಲ್ಲ ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರ ಸಮ್ಮಿತಿಸಿದೆ. ಇದಲ್ಲದೆ, ಸೂಕ್ತ ಸ್ಥಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ ಅವರೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇದರಿಂದ ತುಂಬ ಸಂತಸವಾಗಿದೆ. ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.

ಕಾರವಾರದಲ್ಲಿ ಮೆಡಿಕಲ್ ಕಾಲೇಜ ಈಗಾಗಲೆ ಇದೆ. ಇಲ್ಲಿ 160 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯ ಇರುವ ಕಟ್ಟಡ ನಿರ್ಮಾಣಕಾರ್ಯ ವರ್ಷದ ಹಿಂದೆ ಆರಂಭಗೊಂಡಿದೆ. ಇದರಲ್ಲಿ ಎರಡು ಮಹಡಿಗಳನ್ನು ಹೆಚ್ಚುವರಿಯಾಗಿ ನಿರ್ಮಿಸಲಾಗುವುದು. ಜತೆಗೆ ನರರೋಗ ಚಿಕಿತ್ಸಾ ವಿಭಾಗ, ಕ್ಯಾನ್ಸರ್ ಚಿಕಿತ್ಸಾ ವಿಭಾಗ, ಎಂಆರ್ ಐ ಯಂತ್ರ, ಹೀಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿರಬೇಕಾದ ಎಲ್ಲ ಚಿಕಿತ್ಸಾ ವಿಭಾಗ, ತಜ್ಞ ವೈದ್ಯರು, ಅಗತ್ಯ ಉಪಕರಣಗಳನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಲಾಗಿದೆ.

ಇದರ ಜತೆ ಜತೆಗೆ ಜಿಲ್ಲೆಯ ಸೂಕ್ತ ಸ್ಥಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಸ್ಥಳ ಪರಿಶೀಲನೆ ನಡೆಸಿ, ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ಭರವಸೆ ದೊರೆತಿದೆ. ಅಧಿಕಾರಿಗಳ ತಂಡದೊಂದಿಗೆ ಆರೋಗ್ಯ ಸಚಿವರು ಜಿಲ್ಲೆಗೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ದಿನಕರ ಶೆಟ್ಟಿ, ಗಣಪತಿ ಉಳ್ವೇಕರ್ ಮತ್ತಿತರರು ಪಾಲ್ಗೊಂಡಿದ್ದರು. ಈ ಬೇಡಿಕೆ ಈಡೇರಿಸುವಲ್ಲಿ ಸಹಕರಿಸಿದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಸುಧಾಕರ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಎಲ್ಲ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.

See also  ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ  ವಿರುದ್ಧ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು