News Kannada
Tuesday, November 29 2022

ಉತ್ತರಕನ್ನಡ

ಕಾರವಾರ: ಸದಾಶಿವಗಡ ಕೋಟೆಯಲ್ಲಿ ಮೊಳಗಿದ ಕೋಟಿ ಕಂಠ ಗಾಯನ - 1 min read

Photo Credit : By Author
ಕಾರವಾರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಚಿತ್ತಾಕುಲದ ಸದಾಶಿವಗಡ ಕೋಟೆಯಲ್ಲಿ ಹಮ್ಮಿಕೊಂಡಿದ್ದ  ಕೋಟಿ ಕಂಠ ಗಾಯನದಲ್ಲಿ ಜಿಲ್ಲಾ ಉಸ್ತುವಾರಿ ‌ಸಚಿವ ಕೋಟ‌ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್‌ ಸದಸ್ಯ, ಗಣಪತಿ ಉಳ್ವೇಕರ, ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ನೇತೃತ್ವದಲ್ಲಿ ಶುಕ್ರವಾರ ನಡೆಯಿತು.
ಕೋಟಿ ಕಂಠ ಗಾಯನದಲ್ಲಿ ನಾಡಗೀತೆ “ಜಯಭಾರತ ಜನನಿಯ ತನುಜಾತೆ”, “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು”, “ಬಾರಿಸು ಕನ್ನಡ ಡಿಂಡಿಮವ”, “ಹಚ್ಚೇವು ಕನ್ನಡದ ದೀಪ”, “ವಿಶ್ವ ವಿನೂತನ ವಿದ್ಯಾಚೇತನ”, “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಹಾಡುಗಳನ್ನು ಹಾಡಲಾಯಿತು. ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಕನ್ನಡ ಉಳಿಸಿ ಬೆಳೆಸುವುದಕ್ಕಾಗಿ ಪ್ರಮಾಣವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ತಾ.ಪಂ. ಇಒ, ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
See also  ಮಂಗಳೂರು: ಆಮ್ ಆದ್ಮಿ ಪಕ್ಷ ಹಾಗೂ ಯೆನೆಪೋಯ ಕಾಲೇಜು ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು