News Kannada
Monday, October 02 2023
ಉತ್ತರಕನ್ನಡ

ಕಾರವಾರ: ನರೇಗಾದಡಿ ರಾಜ್ಯಾದ್ಯಂತ ಕೆರೆಗಳ ಹೂಳೆತ್ತುವ ಕಾರ್ಯ ಉತ್ತಮವಾದದ್ದು!

NAREGA
Photo Credit : By Author

ಕಾರವಾರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಾರ್ವಜನಿಕ ಜೀವನದಲ್ಲಿ ಊಹಿಸಲಾಗಿದ ನಿಟ್ಟಿನಲ್ಲಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಕೆರೆಗಳನ್ನು ಹೂಳೆತ್ತಲಾಗಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮುಂದಿನ ಐದು ವರ್ಷದಲ್ಲಿ ಇನ್ನೂ ಯಾವೆಲ್ಲ ಕಾಮಗಾರಿಗಳನ್ನ ನರೇಗಾದಡಿ ಕೈಗೊಂಡು ಅಭಿವೃದ್ಧಿಪಡಿಸಬಹುದು ಎಂಬ ದೂರದೃಷ್ಟಿ ಯೋಜನೆಯನ್ನ ತಯಾರಿಸುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.

ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ಮಂಗಳವಾರ ಜರುಗಿದ ದೂರದೃಷ್ಟಿ ಯೋಜನೆ ತಯಾರಿಕೆ ಕುರಿತ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಂಚಾಯತ್‌ ರಾಜ್ಯ ಸಂಸ್ಥೆಗಳು ಸಬಲೀಕರಣವಾಗಬೇಕು, ಜನಸಾಮನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬ ಉದ್ದೇಶದಿಂದ ಈ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಗ್ರಾಪಂ ಸರ್ವಾಂಗೀಣ ಅಭಿವೃದ್ಧಿಗೋಸ್ಕರ ಸರಕಾರ ಹೆಜ್ಜೆ ಇಟ್ಟಿದೆ. ಗ್ರಾಮ ಪಂಚಾಯತಿ ಮಟ್ಟದ ಜನಪ್ರತಿನಿಧಿಗಳು, ಅಧಿಕಾರಿಗಳು ನಿರೀಕ್ಷೆ ಮೀರಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಪ್ರಮೋಷನ್ ಮಾಡುವ ಬೇಡಿಕೆ ಸಲ್ಲುಸಿದ್ದು, ಸರಕಾರ ಅವರಿಗೆ ಸಹಮತ ವ್ಯಕ್ತಪಡಿಸಿದೆ. ಹೀಗಾಗಿ ಪ್ರತಿಯೋಬ್ಬರೂ ಪರಸ್ಪರ ಹೊಂದಾಣಿಕೆ ಮೂಲಕ ಕಾಲಮಿತಿಯೋಳಗೆ ದೂರದೃಷ್ಟಿ ಯೋಜನೆ ತಯಾರಿಕೆ ಪ್ರಕ್ರಿಯೆಯನ್ನ ಸಮರ್ಪಕವಾಗಿ ಪೂರ್ಣಗೊಳಿಸಬೇಕು ಎಂದರು.

ತಂತ್ರಜ್ಞಾನ ಬಳಸಿಕೊಂಡು ಗ್ರಾಮೀಣ ಜನರಿಗೆ ಉತ್ತಮವಾದ ಆಡಳಿತ ನೀಡಬಹುದಾ ಎಂಬ ಹೊಸ ಹೋಸ ಚಿಂತನೆಗಳನ್ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾಡಬೇಕಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಮನೆಗಳಿಗೆ ಮನೆ, ನೀರು, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಲುಪಿಸುವ ಕಾರ್ಯವಾಗಬೇಕು ಎಂದರು.

ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್ ನಾಯ್ಕ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿನ ಜನರ ಬೇಡಿಕೆಗಳನ್ನ ಮುಂದಿಟ್ಟುಕೊಂಡು ದೂರದೃಷ್ಟಿ ಯೋಜನೆ ತಯಾರಿಸುವ ಪ್ರಕ್ರಿಯೆಗೆ ಸರಕಾರ ಮುಂದಾಗಿರುವುದೆ ಹೆಮ್ಮೆಯ ಸಂಗತಿ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಚಿಕ್ಕಪುಟ್ಟ ಪ್ರದೇಶ ಮತ್ತು ವಿಷಯಗಳನ್ನ ಗಣನೆಗೆ ತೆಗೆದುಕೊಂಡು ಜನರಿಗೆ ಸ್ಪಂದಿಸಬೇಕಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮನ್ವಯತೆ ಸಾಧಿಕೊಳ್ಳುವುದು ಮುಖ್ಯವಾಗಿದೆ ಎಂದರು.

ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ್ ಹೆಗಡೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಜನಸಾಮಾನ್ಯರ ಅಭಿಪ್ರಾಯ ಹಾಗೂ ಬೇಡಿಕೆಗೆ ಪೂರಕವಾಗಿ ಯೋಜನೆ ತಯಾರಿಸುವ ಸಂಕಲ್ಪ ಮಾಡಲಾಗಿದೆ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಸರಕಾರದ ಯೋಜನೆಗಳ ಕುರಿತಾದ ಅರಿವು ಮೂಡಿಸುವ ಅಗತ್ಯವಿದೆ. ಜನಪ್ರತಿನಿಧಿಗಳ ಐದು ವರ್ಷದ ಅಧಿಕಾರವದಿ ಹಾಗೂ ಆ ಅವದಿಯಲ್ಲಿ ಅಭಿವೃದ್ಧಿಪಡಿಸಬೇಕಾದ ಅಂಶಗಳನ್ನ ಗುರುತಿಸಿ ಕಾರ್ಯನಿರ್ವಹಿಸುವ ಉದ್ದೇಶದಿಂದ ದೂರದೃಷ್ಟಿ ಯೋಜನೆ ತಯಾರಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ರಾಜ್ಯದ 6000 ಗ್ರಾಮ ಪಂಚಾಯತಿಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭವಾಗಿದೆ. ಅದರಲ್ಲೂ ಪ್ರಪ್ರಥಮವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆಯಾಗುತ್ತಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಯೋಗದಲ್ಲಿ ಉತ್ತಮವಾದ ದೂರದೃಷ್ಟಿ ಯೋಜನೆಗಳು ತಯಾರಾಗಿ ಜಿಲ್ಲೆಯೂ ರಾಜ್ಯಕ್ಕೆ ಮಾದರಿಯಾಗಬೇಕಿದೆ ಎಂದರು.

See also  ಚೆನ್ನೈ: 'ಪೊನ್ನಿಯಿನ್ ಸೆಲ್ವನ್' ಚಿತ್ರದಲ್ಲಿ ನಟ ವಿಕ್ರಮ್ ಅವರ ಫಸ್ಟ್ ಲುಕ್ ಬಿಡುಗಡೆ

ಜಿಲ್ಲಾ ಪಂಚಾಯತ್‌ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಿಯಾಂಗಾ ಎಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ 29-30 ವರ್ಷಗಳ ಹಿಂದೆ ಪ್ರಾರಂಭವಾದ ವಿಕೇಂದ್ರೀಕರಣ ವ್ಯವಸ್ಥೆಯಿಂದ ಸಾಕಷ್ಟು ಬದಲಾವಣೆಯಾಗಿವೆ. ಅದರಲ್ಲೂ ಅಧೀಕಾರ ಹಾಗೂ ಆರ್ಥಿಕ ವಿಕೇಂದ್ರೀಕರಣ ಪ್ರಮುಖವಾಗಿದ್ದು, ಸ್ಥಳಿಯ ಸಂಸ್ಥೆಗಳು ಪ್ರಬಲವಾಗಿ ಕಾರ್ಯನಿರ್ವಹಿಸಲು ದೂರದೃಷ್ಟಿ ಯೋಜನೆ ಪೂರಕವಾಗಿದೆ. ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ದೃಷ್ಟಿಯಿಂದ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರನ್ನು ಒಳಗೊಂಡಂತೆ ಯೋಜನೆ ರೂಪಿಸಲಾಗುತ್ತಿದೆ. ಗ್ರಾಪಂ ಗೆ ಮುಂದಿನ ಐದು ವರ್ಷಗಳಲ್ಲಿ ಏನೆಲ್ಲ ಅಗತ್ಯವಿದೆ ಎಂಬುವ ಬೇಡಿಕೆಗಳಡಿ ದೂರದೃಷ್ಟಿ ಯೋಜನೆ ತಯಾರಿಸಲು ಸರಕಾರ ಆದೇಶಿಸಿದೆ. ಈ ನಿಟ್ಟಿನಲ್ಲಿ ಜಿಲ್ಲಾ, ತಾಲೂಕಾ ಮಟ್ಟದ ತರಬೇತಿ ಕಾರ್ಯಗಾರಗಳನ್ನು ನಡೆಸಿ ಅಗತ್ಯ ಮಾಹಿತಿ ನೀಡಲಾಗಿದೆ ಎಂದರು. ಇದೇವೆಳೆ ಗ್ರಾಮ ಪಂಚಾಯತಿ ದೂರದೃಷ್ಟಿ ಯೋಜನೆ ತಯಾರಿಕೆಯ ಕುರಿತ ಮಾಹಿತಿ ಒಳಗೊಂಡ ಕೈಪಿಡಿಯನ್ನು ಸಚಿವರು ಬಿಡುಗಡೆ ಮಾಡಿದರು.

ವಿಧಾನ ಸಭಾ ಸದಸ್ಯರಾದ ಗಣಪತಿ ಉಳ್ವೇಕರ, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ನಗರ ಸಭೆಯ ಅಧ್ಯಕ್ಷರಾದ ಡಾ. ನಿತಿನ್ ಪಿಕಳೆ, ಉಪಾಧ್ಯಕ್ಷರಾದ ಪಿ. ನಾಯ್ಕ, ಜಿಲ್ಲಾ ಪಂಚಾಯತ್‌ನ ಅಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಡಿ.ಎಂ. ಜಕ್ಕಪ್ಪಗೋಳ, ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ, ಮುಖ್ಯ ಲೆಕ್ಕಾಧಿಕಾರಿ ಸತೀಶ ಪವಾರ್, ಎನ್‌ಆರ್‌ಎಲ್‌ಎಂನ ಯೋಜನಾ ನಿರ್ದೇಶಕರಾದ ಕರೀಂ ಅಸಾದಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು