News Kannada
Saturday, December 03 2022

ಉತ್ತರಕನ್ನಡ

ಕಾರವಾರ‌: ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ

Public Hearing Meeting at Tahsildar's Office
Photo Credit : By Author

ಕಾರವಾರ‌: ನಗರದ ನಂದನಗದ್ದಾ ಸಣ್ಣ ಮಸೀದಿ‌ ಹತ್ತಿರ ಚಿಪ್ಕರವಾಡ, ಜೋಶಿವಾಡ ಹಾಗೂ ಗಾಬಿತವಾಡದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಡಿತರ ವಿತರಣೆ ಅಂಗಡಿಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುವ ಕುರಿತು ತಹಶೀಲ್ದಾರರಿಗೆ ಶಾಸಕಿ ರೂಪಾಲಿ ಎಸ್. ನಾಯ್ಕ ಸೂಚಿಸಿದರು.

ಸೋಮವಾರ ನಗರದ ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ನಡೆಸಿ ಅವರು ಮಾತನಾಡಿದರು. ಜನರು ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ತಾಲ್ಲೂಕಿನ ಅಮದಳ್ಳಿಯ ಅಚ್ಚಕನ್ಯೆಯ ಬಳಿ ಸೇತುವೆ ನಿರ್ಮಿಸಲಾಗಿದೆ. ಆದರೆ, ಚರಂಡಿ ನಿರ್ಮಾಣದ ಸಮಸ್ಯೆ ಇರುವುದರಿಂದ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ಭರವಸೆ ನೀಡಿದರು.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದ ಅರ್ಗಾದ ಪುರಾತನ ಕೆರೆಯು ಮುಚ್ಚಿರುತ್ತಾರೆ. ಈ ಕೆರೆ ಅವಶ್ಯಕವಾಗಿದೆ ಎಂದು ಸಾರ್ವಜನಿಕರು ನೀಡಿದ ಕಾರಣ ಸಮಸ್ಯೆಯನ್ನು ಪರಿಶೀಲಿಸಿ ಇತ್ಯರ್ಥ ಪಡಿಸುವುದಾಗಿ ಹೇಳಿದರು.ಅಲ್ಲದೇ, ಹಣಕೋಣ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವಾರ್ಡ್‌ಸಭೆ,‌ಗ್ರಾಮ ಸಭೆಗಳ ಮಾಹಿತಿಯನ್ನು ಪಡೆದುಕೊಳ್ಳುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಎಂಜೀನಿಯರ್, ಕಂದಾಯ ಇಲಾಖೆ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

See also  ಓಮಿಕ್ರಾನ್ ; ಉ.ಕ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ: ಸಚಿವ ಶಿವರಾಮ ಹೆಬ್ಬಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು