ಕಾರವಾರ: ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಬಹು ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಎಸ್. ವಿಜಯಕುಮಾರ ಹೇಳಿದರು.
ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಕ್ರೀಡಾಕೂಟ-೨೦೨೨ವನ್ನು ಉದ್ಘಾಟಿಸಿ ಮಾತನಾಡಿದರು.
ಪೊಲೀಸ್ ಸಿಬ್ಬಂದಿಗಳಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಬಹಳ ಮುಖ್ಯ. ಸದಾ ಒತ್ತಡದಲ್ಲಿರುವವರನ್ನು ಆರೋಗ್ಯ ಕಾಪಾಡಿಕೊಳ್ಳಲು ಇಂತಹ ಕ್ರೀಡಾಕೂಟಗಳು ತುಂಬಾ ಸಹಕಾರಿಯಾಗುತ್ತದೆ. ಕ್ರೀಡಾಕೂಟದಲ್ಲಿ ಎಲ್ಲರೂ ಸಕ್ರೀಯವಾಗಿ ಭಾಗವಹಿಸುವುದು ಮುಖ್ಯ. ಸ್ಪರ್ಧೆಯಲ್ಲಿ ಭಾಗವಹಿಸಿದವರು ಸದಾ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು ಎಂದರು.
ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್. ಪ್ರಾಸ್ತಾವಿಕ ಮಾತನಾಡಿ, ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಿ.ಪಿ.ಐ ನಿತ್ಯಾನಂದ ಪಂಡಿತ ನಿರೂಪಿಸಿದರು. ಕೊನೆಯಲ್ಲಿ ಎಡಿಷನಲ್ ಎಸ್.ಪಿ ಬದ್ರಿನಾಥ ವಂದಿಸಿದರು.
ಕ್ರೀಡಾಕೂಟದಲ್ಲಿ ಪೊಲೀಸ್ ಪುರುಷ ಹಾಗೂ ಮಹಿಳಾ ಸಿಬ್ಬಂದಿಗಳು ವಿವಿಧ ವಿಭಾಗಗಳಲ್ಲಿ ತಮ್ಮ ಕ್ರೀಡಾ ಚಾಕಚಕ್ಯತೆ ತೋರಿಸುವ ಮೂಲಕ ಕ್ರೀಡಾಕೂಟಕ್ಕೆ ಮೆರಗನ್ನು ತಂದರು.