News Kannada
Friday, December 02 2022

ಉತ್ತರಕನ್ನಡ

ಕಾರವಾರ: ಬಂದರಿನಲ್ಲಿ ಆಳ ಸಮುದ್ರ ಮೀನುಗಾರಿಕೆ ಕುರಿತು ಮಾಹಿತಿ

Karwar: Fishermen in Karwar port informed about deep sea fishing
Photo Credit : By Author

ಕಾರವಾರ: ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ನಗರದ ಬೈತಖೋಲದ ವಾಣಿಜ್ಯ ಬಂದರಿನಲ್ಲಿ ಭಾರತೀಯ ಮೀನುಗಾರಿಕಾ ಸರ್ವೇಕ್ಷಣ ಸಂಸ್ಥೆಯ ವತಿಯಿಂದ ಮೀನುಗಾರರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಳ ಸಮುದ್ರ ಮೀನುಗಾರಿಕೆ ಕುರಿತು ಮಾಹಿತಿ ನೀಡಲಾಯಿತು.

ಕೇಂದ್ರ ಮೀನುಗಾರಿಕಾ ಇಲಾಖೆ ಸಹಕಾರದಲ್ಲಿ ಮತ್ಸ್ಯ ಸಂಪದ ಯೋಜನೆಯಡಿ ಲಾಂಗ್ ಲೈನರ್ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಗೆ ೪೫ ಆಳ ಸಮುದ್ರ ಮೀನುಗಾರಿಕಾ ಬೋಟುಗಳನ್ನು ಮಂಜೂರು ಮಾಡಲಾಗಿದೆ. ಅವುಗಳನ್ನು ಆಯ್ದ ಮೀನುಗಾರರಿಗೆ ನೀಡುವ ಸಂಬಂಧ ಆಳ ಸಮುದ್ರ ಮೀನುಗಾರಿಕೆ ಮತ್ತು ಬೋಟ್‌ಗಳ ಬಗ್ಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಿಯಾಂಗ ಎಂ ಹಾಗೂ ವಿವಿಧ ಶಾಲಾ ಕಾಲೇಜಿನ ಮಕ್ಕಳು ಪಾಲ್ಗೊಂಡಿದ್ದರು. ಇವರಿಗೆ ಭಾರತೀಯ ಮೀನುಗಾರಿಕ ಸರ್ವೇಕ್ಷಣ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಬೋಟ್, ಮೀನುಗರಿಕೆಯ ಉಪಕರಣಗಳು, ಮೀನು ಹಾಗೂ ಅವುಗಳ ಸಂಗ್ರಹಣೆ ಸೇರಿದಂತೆ ವಿಪತ್ತು ನಿರ್ವಹಣೆಯ ಸಲಕರಣೆಗಳ ಬಗ್ಗೆ ಮಾಹಿತಿ ನೀಡಿದರು.

See also  ಕಾರವಾರ: ಕನ್ನಡ ಭಾಷಾ ಸಮಗ್ರ ವಿಧೇಯಕ 2021 ಕರಡು ಸಿದ್ದ- ಅನುಮೋದಿಸುವಂತೆ ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು