News Kannada
Tuesday, February 07 2023

ಉತ್ತರಕನ್ನಡ

ಕಾರವಾರ: ಕಾಲೇಜಿನ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

Bhoomi Pujan for new college building
Photo Credit : By Author

ಕಾರವಾರ: ಕಟ್ಟಡ ನಿರ್ಮಾಣ ಕಾಮಗಾರಿ ವ್ಯವಸ್ಥಿತವಾಗಿ ನಿರ್ಮಾಣವಾಗಬೇಕು ಎಂದು ಶಾಸಕಿ ರೂಪಾಲಿ ಎಸ್‌.ನಾಯ್ಕ ಹೇಳಿದರು. ನಗರದ  ಗ್ಯಾಸ್‌ ಕಾಲೇಜುನಲ್ಲಿ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ  ನೆರವೇರಿಸಿ ಅವರು ಮಾತನಾಡಿದರು.

ನಗರದ ಹೃದಯ ಭಾಗದಲ್ಲಿರುವ ಈ ಕಾಲೇಜು ಅತ್ಯಂತ ಮಹತ್ವದ್ದಾಗಿದೆ. ಶೈಕ್ಷಣಿಕ ಗುಣಮಟ್ಟವು ಉತ್ತಮವಾಗಿದ್ದು, ಕಟ್ಟಡ ನಿರ್ಮಾಣಕ್ಕೆ 4 ಕೋಟಿ ರೂ. ಒದಗಿಸಲಾಗಿದೆ. ಈಗ ಇರುವ ಜಾಗದಲ್ಲಿ ಕಟ್ಟಡಗಳನ್ನು ಸಮರ್ಪಕವಾಗಿ ನಿರ್ಮಾಣ ಮಾಡಬೇಕು ಎಂದರು. ಐತಿಹಾಸಿಕ ಮಹತ್ವವನ್ನು ಈ ಕಾಲೇಜು ಹೊಂದಿದೆ. ಇಲ್ಲಿ ಕಲಿತ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ನಗರವು ಬೆಳೆಯುತ್ತಿದೆ. ಆಕರ್ಷಣೆ, ಹಾಗೂ ಉತ್ತಮ ಶೈಕ್ಷಣಿಕ ಕೇಂದ್ರವಾಗಿ ಈ ಕಾಲೇಜು ಬೆಳೆಯಬೇಕು ಎಂದರು.

ಈ ಸಂದರ್ಭದಲ್ಲಿ  ಬಿಜೆಪಿ‌ನಗರ ಮಂಡಲ ಅಧ್ಯಕ್ಷರಾದ ನಾಗೇಶ್ ಕುರ್ಡೇಕರ, ಗ್ರಾಮೀಣ ಮಂಡಲದ ಅಧ್ಯಕ್ಷರಾದ  ಸುಭಾಷ್ ಗುನಗಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರಾಜೇಶ ನಾಯ್ಕ, ಅರುಣ ಸಾಳುಂಕೆ,  ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.

See also  ಬೆಳ್ತಂಗಡಿ: ನಾಟಿ ವೈದ್ಯೆ ಪಾರ್ವತಮ್ಮ ಹೃದಯಾಘಾತದಿಂದ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು