News Kannada
Monday, January 30 2023

ಉತ್ತರಕನ್ನಡ

ಕಾರವಾರ: ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸರಕಾರದಿಂದ ಅನುದಾನ

Karwar: Dr. Govt sanctions funds for construction of B R Ambedkar statue
Photo Credit : By Author

ಕಾರವಾರ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ೨೫ ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಬಿಜೆಪಿ ಎಸ್‌ಪಿ ಮೋರ್ಚಾ ಹರ್ಷ ವ್ಯಕ್ತಪಡಿಸಿದೆ.

ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಉದಯ ಬಶೆಟ್ಟಿ, ಬಹುದಿನಗಳ ಕನಸನ್ನು ಸರ್ಕಾರ ಈಡೇರಿಸಿರುವುದು ಸಮುದಾಯಕ್ಕೆ ಸಂತಸ ತಂದಿದೆ ಎಂದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಸ್‌ಸಿ ಮೋರ್ಚಾ, ದಲಿತ ಸಂಘರ್ಷ ಸಮಿತಿ, ದಲಿತ ರಕ್ಷಣಾ ವೇದಿಕೆ ಸೇರಿದಂತೆ ಹಲವಾರು ಸಂಘಟನೆಗಳು ಅನೇಕ ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದು, ಅದರ ಪ್ರತಿಫಲ ಈಗ ದೊರೆತಿದೆ ಎಂದು ಬಶೆಟ್ಟಿ ತಿಳಿಸಿದರು.

ಪ್ರತಿಮೆ ಸ್ಥಾಪನೆಗೆ ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದ ಅನಂತಕುಮರ ಹೆಗಡೆ, ಸಚಿವ ಶಿವರಾಮ ಹೆಬ್ಬಾರ, ಶಾಸಕಿ ರೂಪಾಲಿ ನಾಯ್ಕ, ಶಾಸಕರಾದ ಸುನೀಲ ನಾಯ್ಕ, ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಶಾಂತಾರಾಮ ಹಾಗೂ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯ್ಕ ಅವರಿಗೆ ಬಶೆಟ್ಟಿ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು. ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಜಯಂತಿಯಂದು ಫೋಟೊಗಳನ್ನು ಇಟ್ಟು ನಾವು ಕಾರ್ಯಕ್ರಮಗಳನ್ನು ನಡೆಸಬೇಕಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿರುವ ತಹಸೀಲ್ದಾರ್ ಕಚೇರಿಗಳಲ್ಲಿ ಡಾ. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆ ಮಾಡಬೇಕು ಎಂದು ಜಿಲ್ಲೆಯಾದ್ಯಂತ ಹೋರಾಟ ನಡೆಸಲಾಗಿತ್ತು ಎಂದರು. ಆರಂಭದಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಹಾಗೂ ಅನಸೂಚಿತ ಬುಡಕಟ್ಟು ಆಯೋಗದ ಅಧ್ಯಕ್ಷ ನೆಹರೂ ಓಲೇಕಾರ ಅವರಿಗೆ ಮನವಿ ಸಲ್ಲಿಸಲಾಗಿತ್ತು ಎಂದು ಅವರು ತಿಳಿಸಿದರು.

ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಸೂರ್ಯಪ್ರಕಾಶ, ಎಸ್‌ಪಿ ಮೋರ್ಚಾ ಕಾರ್ಯದರ್ಶಿ ತಿಮ್ಮಾರೆಡ್ಡಿ ಎಸ್‌ಸಿ ಮೋರ್ಚಾ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಿತೇಶ ಕೇಣಿ ಮಾತನಾಡಿದರು. ಎಸ್‌ಸಿ ಮೋರ್ಚಾದ ಹನುಮಂತ ಶಿಗ್ಲಿ, ಬರಮಪ್ಪ ಕಟ್ಟಿಮನಿ, ರಾಜು ವಡ್ಡರ, ರಾಜೇಶ್ ಪತ್ರಿಕಾಗೋಷ್ಠಿಯಲ್ಲಿದ್ದರು.

See also  ಮೈಸೂರು: ಮೋದಿ@20 ಕೃತಿ ಕುರಿತು ವಿಚಾರ ಸಂಕಿರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು