News Kannada
Sunday, January 29 2023

ಉತ್ತರಕನ್ನಡ

ಕಾರವಾರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ

Karwar: Protest near deputy commissioner's office demanding various demands
Photo Credit : By Author

ಕಾರವಾರ: ವಿವಿಧ ಬೇಡಿಕೆಗಳಿಗನ್ನು ಶೀಘ್ರವೇ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ನಗರದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ನಗರದ ಕಾರ್ಮಿಕ ಇಲಾಖೆ ಕಚೇರಿ ಬಳಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಹಾಲಿ ಹಾಗೂ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಮೆರವಣಿಗೆಯ ಮೂಲಕ ನಗರದಲ್ಲಿ ಮೆರವಣಿಗೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಹಾಕಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯ ಬಳಿ ಸೇರಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಅಂಗನವಾಡಿ ನೌಕರರಿಗೆ ಗ್ರಾಚ್ಯುಟಿ ಪಾವತಿಸುವಂತೆ, ಸೇವಾ ಸೌಲಭ್ಯ, ಉದ್ಯೋಗ ಭದ್ರತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು. ಪ್ರತಿಭಟನಾಕಾರರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಪಾವತಿಸಲು ಸರ್ಕಾರ ಕೂಡಲೇ ನಿರ್ದೇಶನ ನೀಡಬೇಕು. ಅನ್ನಾಹಾರದ ಜೊತೆಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿ, ಬಲಿಷ್ಠ ಪಡಿಸಬೇಕು. ಐಸಿಡಿಎಸ್ ಮಾರ್ಗದರ್ಶಿ ಸೂಚಿಗಳ ಪ್ರಕಾರ ಇರುವ ೫ ಉದ್ದೇಶಗಳಿಗೆ ಹಾಗೂ ೬ ಸೇವೆಗಳಿಗೆ ಮಾತ್ರ ಅಂಗನವಾಡಿ ನೌಕರರನ್ನು ಬಳಸಬೇಕು.

ಅಂಗನವಾಡಿ ಕೇಂದ್ರಗಳಲ್ಲಿ ಮಾತೃಪೂರ್ಣ ಯಶಸ್ವಿ ಮಾಡಲು ಹೆಚ್ಚುವರಿ ಸಹಾಯಕಿಯನ್ನು ನೀಡಬೇಕು. ಅಂಗನವಾಡಿ ಕೇಂದ್ರಗಳಿಗೆ ಎಲ್ಲಾ ರೀತಿಯ ಗುಣಾತ್ಮಕ ಮೂಲಭೂತ ಸೌಲಭ್ಯಗಳನ್ನೊದಗಿಸಬೇಕು. ೧೯೯೫ ರಿಂದ ಪ್ರಾರಂಭವಾಗಿರುವ ಎಲ್ಲಾ ಯೋಜನೆಗಳಲ್ಲಿ ಆಯ್ಕೆಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಎಸ್.ಎಸ್.ಎಲ್.ಸಿ ಪಾಸಾದವರು, ಅನೇಕರು ಪಧವೀದರರು ಆಗಿರುವುದರಿಂದ ಅವರಿಗೆ ತರಬೇತಿ ನೀಡಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್. ಕೆ. ಜಿ., ಯು. ಕೆ. ಜಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

See also  ಕಾರವಾರ:  ಮೀನುಗಾರರ ಅಭಿವೃದ್ಧಿಗೆ ಸರಕಾರ ಬದ್ಧ ಎಂದ ಶಾಸಕಿ ರೂಪಾಲಿ ನಾಯ್ಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು