News Kannada
Monday, February 06 2023

ಉತ್ತರಕನ್ನಡ

ಕಾರವಾರ: ಸರಕಾರದ ಸೌಲಭ್ಯ ಜನರಿಗೆ ತಲುಪಿಸಿ ಎಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ

Minister Kota Srinivas Poojary said that the government facilities should be made available to the people.
Photo Credit : By Author

ಕಾರವಾರ: ಕಿಸಾನ್ ಸಮ್ಮಾನ್ ಯೋಜನೆಯಡಿ 172000 ಫಲನುಭವಿಗಳಿದ್ದು ಅವರಿಗೆ ಸರ್ಕಾರದಿಂದ ಸೇರಬೇಕಾದ ಎಲ್ಲ ಸೌಲಭ್ಯಗಳು ಸೇರುತಿರುವುದರ ಬಗ್ಗೆ ಹಾಗೂ ಈ ಯೋಜನೆಗೆ ಯಾವುದಾದರೂ ತಾಂತ್ರಿಕ ಸಮಸ್ಯೆ ಇದ್ದರೆ ಸಂಪೂರ್ಣ ಮಾಹಿತಿಯ ವರದಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 33364 ಹೆಕ್ಟರ್ ಪ್ರದೇಶದಲ್ಲಿ ಅಡಿಕೆ ಬೆಳೆಯನ್ನು ಬೆಳೆಯಲಾಗುತ್ತದೆ. ಅದರಲ್ಲಿ 3290 ಹೆಕ್ಟರ್ ಪ್ರದೇಶದ ಪ್ರದೇಶದಲ್ಲಿ ಚುಕ್ಕಿ ಎಲೆ ರೋಗದಿಂದ ಹಾನಿಯಾಗಿದೆ. ಚುಕ್ಕಿ ಎಲೆ ರೋಗದ ಪರಿಹಾರಕ್ಕೆ ಇಲಾಖೆಯಿಂದ ಏನೆಲ್ಲ ಕ್ರಮ ಕೈಕೊಂಡಿರುವುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸರ್ಕಾರದ ಜನ ಪರ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿನೆಯನ್ನು ನೀಡಿದರು. ಹಿಂದಿನ ಸಭೆಯಲ್ಲಿ ಹೇಳಿದಂತೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಡತಗಳನ್ನು ವಿಲೇವಾರಿ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವಂತೆ ತಿಳಿಸಲಾಗಿತ್ತು. ಈ ಬಗ್ಗೆ ಅಧಿಕಾರಿಗಳು ಕೈಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಪಶು ಸಂಗೋಪನೆ ಇಲಾಖೆಯಿಂದ ಹಳಿಯಾಳ ತಾಲೂಕಿನಲ್ಲಿ ಗೋಶಾಲೆಯನ್ನು ಪ್ರಾರಂಭಿಸಲಾಗಿದೆ ವಿವಿಧ ಸಂಘ ಸಂಸ್ಥೆಗಳು ಗೋವುಗಳನ್ನು ಪೂರೈಸಿದ್ದಲ್ಲಿ ಅವುಗಳ ಸಾಕಾಣಿಕೆಯನ್ನು ಸಂಬಂಧಪಟ್ಟ ಇಲಾಖೆಯವರು ಮಾಡಲಿದ್ದಾರೆ ಎಂದರು.

ಉಳಿದ ಗೋಶಾಲೆಗಳನ್ನು ಇನ್ನೂ ಕೆಲವೇ ದಿನದಲ್ಲಿ ಪ್ರಾರಂಭಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಒಟ್ಟು 2500 ಪ್ರಾಣಿಗಳಿಗೆ ಚರ್ಮ ಗಂಟು ರೋಗ ಬಂದಿದ್ದು ಅದರಲ್ಲಿ 1000 ಪ್ರಾಣಿಗಳು ಗುಣಮುಖವಾಗಿವೆ 122000 ಪ್ರಾಣಿಗಳಿಗೆ ಲಸಿಕೆ ನೀಡಲಾಗಿದೆ 111 ಪ್ರಾಣಿಗಳು ಅಸುನಿಗಿರುತ್ತವೆ ಸರ್ಕಾರದಿಂದ 76 ಪ್ರಾಣಿಗಳಿಗೆ ಪರಿಹಾರ ಮಂಜೂರು ಆಗಿದ್ದು ಶೀಘ್ರದಲ್ಲಿ ಫಲನುಭವಿಗಳ ಖಾತೆಗೆ ವರ್ಗಾಯಿಸಲಾಗುವುದು.

ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಈಗಾಗಲೇ ವಿದ್ಯಾರ್ಥಿ ವೇತನ ಪವತಿಸಿರುವ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಾವತಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಹಂತದಲ್ಲಿ 50 ದ್ವಿಚಕ್ರ ವಾಹನಗಳನ್ನು ನಿರುದ್ಯೋಗಿಗಳಿಗೆ ನೀಡಲಾಗುವುದು. ರೂ. 50000 ಸಬ್ಸಿಡಿ ಹಾಗೂ ರೂ 20000 ಬ್ಯಾಂಕ್ ಸಾಲಗಳ ಮೂಲಕ ಪೂರೈಸಲಾಗುವುದು. ಇದರಿಂದ ಸಣ್ಣ ಪುಟ್ಟ ವ್ಯಾಪಾರ ಮಾಡಲು ಮತ್ತು ಅವರನ್ನು ಸ್ವಾವಲಂಬಿಯಾಗಿ ಮಾಡುವುದೇ ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ಜಿಲ್ಲೆಯಲ್ಲಿ 19000 ಕ್ವೀಟಲ್ ಭತ್ತ ಇದ್ದು ಭತ್ತ ಖರೀದಿ ಮಾಡಲು ಖರೀದಿ ಕೇಂದ್ರ ಇದ್ದು ಯಾವೆಲ್ಲ ಪ್ರದೇಶಗಳಲ್ಲಿ ಮಾಡಿದ್ದೀರಿ ಮತ್ತು ರೈತರು ಭತ್ತ ಖರೀದಿ ಕೇಂದ್ರಕ್ಕೆ ಭತ್ತವನ್ನು ಯಾವ ಕಾರಣಕ್ಕೆ ನೀಡುತ್ತಿಲ್ಲ. ಒಂದು ವೇಳೆ ಗೋದಾಮಗಳು ಇಲ್ಲದಿದ್ದಲ್ಲಿ ಎಪಿಎಂಸಿ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಂಪರ್ಕಿಸಿ ಗೋದಾಮು ನಿರ್ಮಾಣಕ್ಕೆ ಅನುಮೋದನೆ ಪಡೆದುಕೊಂಡು ರೈತರಿಗೆ ಅನುಕೂಲ ಮಾಡಿಕೊಡುವುದು ಇಲಾಖೆಯ ಜವಾಬ್ದಾರಿಯಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

See also  ಕಾರವಾರ: ದೂರು ದಾಖಲಿಸಿಕೊಳ್ಳಲು ಹಿಂದೆಟು, ನ್ಯಾಯಕ್ಕೆ ಆಗ್ರಹ

ಕಾಳಿ ನದಿಯ ಹಾಗೂ ಜಲಾಶಯ ಪ್ರದೇಶದಲ್ಲಿ ಮರಳು ತೆಗೆಯುವ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ಬಗ್ಗೆ ಶೀಘ್ರವೇ ನಿರ್ಧಾರ ಮಾಡಲಾಗುವುದು. ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸುವ ವಿಚಾರದ ಬಗ್ಗೆ ಉತ್ತರ ಕರಾವಳಿಯ ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿ, ಚರ್ಚೆ ನಡೆದ ಬಳಿಕ ಕ್ರಮಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಶಾಸಕಿ ರೂಪಾಲಿ ನಾಯ್ಕ, ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಧಿಕಾರಿ ಈಶ್ವರ್ ಖಂಡೋ, ಎಸ್ಪಿ ವಿಷ್ಣುವರ್ಧನ್ ಎನ್, ಡಿಎಫ್ಒ ಪ್ರಶಾಂತ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು