News Kannada
Wednesday, February 08 2023

ಉತ್ತರಕನ್ನಡ

ಕಾರವಾರ: ಪೌಷ್ಠಿಕ ಕೈತೋಟ ನಿರ್ಮಾಣ ಕಾಮಗಾರಿ ತ್ವರಿತವಾಗಲಿ – ದೇವರಾಜ್ ಹಿತ್ತಲಕೊಪ್ಪ

Let the construction of nutritious garden be expedited: Devaraj Hittalakoppa
Photo Credit : By Author

ಕಾರವಾರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಪೌಷ್ಠಿಕ ಕೈತೋಟ, ವೈಯಕ್ತಿಕ ಪೌಷ್ಠಿಕ ಕೈತೋಟ ನಿರ್ಮಾಣದಲ್ಲಿ ಅನುಷ್ಠಾನ ಇಲಾಖೆಗಳೊಂದಿಗೆ ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಾದ ದೇವರಾಜ್ ಹಿತ್ತಲಕೊಪ್ಪ ಅವರು ಅಧಿಕಾರಿಗಳಿಗೆ ತಿಳಿಸಿದರು.

ಬುಧವಾರ ಶಿರಸಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಶಾಲಾ ಪೌಷ್ಠಿಕ ಕೈತೋಟ, ವೈಯಕ್ತಿಕ ಪೌಷ್ಠಿಕ ಕೈತೋಟ ಕುರಿತ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಆಯುಕ್ತಾಲಯದ ನಿರ್ದೇಶನದಂತೆ ಪೌಷ್ಠಿಕತೆ ಕಾಪಾಡುವ ನಿಟ್ಟಿನಲ್ಲಿ ಶಾಲಾ/ವೈಯಕ್ತಿಕ, ಪೌಷ್ಠಿಕ ಕೈತೋಟ, ನರ್ಸರಿ ನಿರ್ಮಾಣ ಮುಂತಾದ ಕಾಮಗಾರಿಗಳಿಗೆ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯತ್‌ಗೆ 101 ರಂತೆ ಪೌಷ್ಠಿಕ ಕೈತೋಟ ನಿರ್ಮಾಣಕ್ಕೆ ಗುರಿ ನೀಡಲಾಗಿದೆ. ಎಲ್ಲಾ ಇಲಾಖೆಗಳು ಒಮ್ಮತದಿಂದ ಕಾರ್ಯನಿರ್ವಹಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕರಾದ ರಾಮಮೂರ್ತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರವಿ ಬೆಂಚಳ್ಳಿ, ಕೃಷಿ ಸಹಾಯಕ ನಿರ್ದೇಶಕರಾದ ಮಧುಕರ ನಾಯ್ಕ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಗಣೇಶ ಹೆಗಡೆ, ಎನ್ ಆರ್ ಎಲ್ ಎಮ್ ವಲಯ ಮೇಲ್ವಿಚಾರಕರು, ತಾಲೂಕು ಐಇಸಿ ಸಂಯೋಜಕರು, ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

See also  ಭಟ್ಕಳದಲ್ಲಿ ಭಾರೀ ಮಳೆಗೆ ಚೌಥನಿ ನದಿ ಸುತ್ತಮುತ್ತಲಿನ ಗ್ರಾಮ ಜಲಾವೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು