News Kannada
Tuesday, February 07 2023

ಉತ್ತರಕನ್ನಡ

ಕಾರವಾರ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Photo Credit : By Author

ಕಾರವಾರ: ಕುಮಟಾ ನಗರದ ರೈಲ್ವೆ ಸ್ಟೇಷನ್ ಬಳಿ ಮಂಗಳವಾರ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 1.25 ಲಕ್ಷ ರೂ. ಮೌಲ್ಯದ ಗಾಂಜಾ ಹಾಗೂ ಮೂವರು ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿರಸಿ ಮೂಲದ ವಿನಾಯಕ ಕೆಂಪಣ್ಣ ಕರ್ನಿಂಗ, ನಿಖಿಲ ಮಾದೇವ ಅಂಬಿಗ ಹಾಗೂ ಭಟ್ಕಳ ಮೂಲದ ಸಮಿ ಅಬ್ಬಾಸ್ ಬಂಧಿತ ಆರೋಪಿಗಳಗಿದ್ದಾರೆ.

ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರುವ ಖಚಿತ ಮಾಹಿತಿಯನ್ನು ಮೇರೆಗೆ ಕುಮಟಾ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1.25 ಲಕ್ಷ ರೂ ಮೌಲ್ಯದ 4.76 ಕೆ.ಜಿ. ಗಾಂಜಾ ಹಾಗೂ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳ ಪೈಕಿ ಶಿರಸಿ ಮೂಲದ ಇಬ್ಬರ ಈ ಮೊದಲು ಕೊಲೆ ಯತ್ನ, ದರೋಡೆ ಸೇರಿದಂತೆ ಇತರ ಪ್ರಕರಣಗಳಲ್ಲಿ ಬಂಧಿತರಾಗಿದ್ದರು ಎಂದು ತಿಳಿದುಬಂದಿದೆ.

ಪ್ರಕರಣ ಕುಮಟಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ದಾಳಿಯಲ್ಲಿ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ, ಪಿಎಸ್ಐ ರವಿ ಗುಡ್ಡಿ, ಸಿಬ್ಬಂದಿ ಗಣೇಶ್ ನಾಯ್ಕ, ಗುರು ನಾಯಕ, ಅಸಿಫ್, ಲೋಕೇಶ್ ಅರಿಶಿನಗುಪ್ಪಿ, ರಾಜು ನಾಯ್ಕ, ಶಿವಾನಂದ ಜಾಡರ, ಸಂಜೀವ ನಾಯ್ಕ ಇದ್ದರು.

See also  ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರೋತ್ಸವ ಆಚರಣೆಗೆ ಭೂಮಿ ಹಕ್ಕು ಹೋರಾಟಗಾರರ ನಿರ್ಧಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು