News Kannada
Saturday, February 04 2023

ಉತ್ತರಕನ್ನಡ

ಕಾರವಾರ: ಬೆಂಕಿ ತಗುಲಿ ಲಾರಿ ಸಂಪೂರ್ಣ ಭಸ್ಮ

Photo Credit : By Author

ಕಾರವಾರ: ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಗ್ರಾಮದ ಬಳಿ‌ ಶನಿವಾರ ಸಂಭವಿಸಿದೆ.

ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಲಾರಿ, ಹೆದ್ದಾರಿಯಲ್ಲಿ ಆಗಮಿಸುತ್ತಿದ್ದ ವೇಳೆ ಲಾರಿಯಲ್ಲಿ ಒಂದೇ ಸಮನೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಲಾರಿಯನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ಇದರಿಂದ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಲಾರಿಯು ರಾಸಾಯನಿಕ ವಸ್ತು ಸಾಗುತ್ತಿತ್ತು ಎಂದು ಹೇಳಲಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ. ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಕಾರವಾರ: ಆನ್ಲೈನ್ ಗೇಮ್ ಗೀಳಿಗೆ ಬಿದ್ದು ಹಣ ಕಳೆದುಕೊಂಡ ಬ್ಯಾಂಕ್ ಅಧಿಕಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು