ಕಾರವಾರ: ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿ ಪ್ರಮೋದ ಹೆಗಡೆ ಅವರ ಪ್ರಮೋದ ಹೆಗಡೆ 70 ಅಭಿನಂದನಾ ಸಮಾರಂಭ ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ರವಿವಾರ ಯಲ್ಲಾಪುರ ಪಟ್ಟಣ ರೈತ ಸಭಾಂಗಣದಲ್ಲಿ ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.
ಸಂಕಲ್ಪ ಸಂಸ್ಥೆಯ ಮೂಲಕವಾಗಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಸ್ಥಳೀಯ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿ ಪ್ರಮೋದ ಹೆಗಡೆ ಅವರನ್ನು ಸಚಿವರು ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿ, ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಎಚ್.ಕೆ.ಪಾಟೀಲ್, ದಿನಕರ ಕೆ.ಶೆಟ್ಟಿ, ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿ ಸೇರಿದಂತೆ ಜಿಲ್ಲೆಯ ಹಿರಿಯ ಮುಖಂಡರು, ಸಹಕಾರಿ ಧುರೀಣರು ಹಾಗೂ ಪ್ರಮೋದ ಹೆಗಡೆ ಅಭಿನಂದನಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.