News Kannada
Sunday, January 29 2023

ಉತ್ತರಕನ್ನಡ

ಕಾರವಾರ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಎರಡು ರಾಜ್ಯ ಮಟ್ಟದ ಪ್ರಶಸ್ತಿ

Karwar: Two state-level awards for government engineering college
Photo Credit : By Author

ಕಾರವಾರ: ರಾಜ್ಯ ಸರ್ಕಾರದ ವತಿಯಿಂದ ಸುಶಾಸನ ದಿನದ ಆಚರಣೆ ಸಂಬಂಧ ರಾಜ್ಯ ಮಟ್ಟದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧೆಗಳಲ್ಲಿ ತಾಲೂಕಿನ ಮಾಜಾಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಎರಡು ಪ್ರಶಸ್ತಿಗೆ ಭಾಜನವಾಗಿದೆ.

ಅತ್ಯುತ್ತಮ ಸಾಂಸ್ಥಿಕ ಅಭಿವೃದ್ಧಿ ಯೋಜನೆ ಯಲ್ಲಿ ರಾಜ್ಯ ಮಟ್ಟದಲ್ಲಿ ಮಾಜಾಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಅದಕ್ಕಾಗಿ ಕಾಲೇಜು ಪ್ರಾಂಶುಪಾಲರಾದ ಡಾ.ಶಾಂತಲಾ ಬಿ. ಅವರು ಸಂಸ್ಥೆಯ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜೇತ ಕಲ್ಮಾಡಿ ಪ್ರಥಮ ಸ್ಥಾನ ಪಡೆದುಕೊಂಡು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚಿಗೆ ನಡೆದ ಸುಶಾಸನ ದಿನದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಶಸ್ತಿ ಪ್ರದಾನ ಮಾಡಿದರು.

ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಜೀವನೋಪಾಯ ಮಿಷನ್ ವ್ಯವಸ್ಥಾಪಕ ನಿರ್ದೇಶಕರು, ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆಯುಕ್ತರು ಮತ್ತಿತರರು ಪಾಲ್ಗೊಂಡಿದ್ದರು.

See also  ಬೆಂಗಳೂರು: ಕಣ್ಮರೆಯಾಗುತ್ತಿರುವ ಅಕ್ಕಿ ತಳಿಗಳಲ್ಲಿ ಮೂಡಿ ಬಂದ ವೈವಿಧ್ಯಮಯ ತಿನಿಸುಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು