ಕಾರವಾರ: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ರವಿವಾರ ಯಲ್ಲಾಪುರ ಪಟ್ಟಣದ ವೇದವ್ಯಾಸ ಕಲ್ಯಾಣ ಮಂಟಪದಲ್ಲಿ ಸೆಂಟ್ರಿಂಗ್ ಮತ್ತು ಬಾರ್ ಬೆಂಡಿಂಗ್ ಕೆಲಸಗಾರರ ಸಂಘದ ವತಿಯಿಂದ ಆಯೋಜಿಸಿದ ಕಾರ್ಯಕ್ರಮ ಉದ್ಘಾಟಿಸಿದರು.
ಸಂಘದ 2022 – 23 ನೇ ಸಾಲಿನ ಕೊಟೇಶನ್ ಅನ್ನು ಬಿಡುಗಡೆಗೊಳಿಸಿ, ತಾಲೂಕಿನ ಸಿವಿಲ್ ಇಂಜಿನಿಯರ್ಸ್ ಗಳಿಗೆ ಸನ್ಮಾನಿಸಿ ಗೌರವಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವಿಜಯ ಮಿರಾಶಿ, ಪ.ಪಂ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ಯಾಮಲಿ ಪಾಟಣಕರ್, ಉದ್ಯಮಿ ಬಾಲಕೃಷ್ಣ ನಾಯಕ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ಗಣಪತಿ ನಾಯ್ಕ ಸೇರಿದಂತೆ ಸೆಂಟ್ರಿಂಗ್ ಮತ್ತು ಬಾರ್ ಬೆಂಡಿಂಗ್ ಕೆಲಸಗಾರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.