ಕಾರವಾರ: ನಗರದಲ್ಲಿ ಜನವರಿ 6 ರಂದು ನಡೆಯಲಿರುವ ಕೂರ್ಮಗಡದಲ್ಲಿ ನರಸಿಂಹ ದೇವರ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಉಪ ವಿಭಾಗಧಿಕಾರಿ ಜಯಲಕ್ಷ್ಮಿ ರಾಯಕೋಡ್ ಹೇಳಿದರು.
ಇಲ್ಲಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವಕ್ಕೆ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ಕಡವಾಡದಿಂದ ನರಸಿಂಹಸ್ವಾಮಿ ದೇವರನ್ನು ತೆಗೆದುಕೊಂಡು ಹೋಗಲು ಮೂರು ರೇತಿ ದೋಣಿಗಳ ವ್ಯವಸ್ಥೆ ಮಾಡಲಾಗಿದೆ ಹಾಗೂ ಸಾರ್ವಜನಿಕರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬೈತಖೋಲ ಮೀನುಗಾರಿಕೆ ಬಂದರುವಿನಿಂದ ದೋಣಿಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಲೈಫ್ ಜಾಕೆಟ್ ಕಡ್ಡಾಯವಾಗಿರುತ್ತದೆ ಹಾಗೂ ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತದೆ ಎಂದರು.
ಸಭೆಯಲ್ಲಿ ತಹಸೀಲ್ದಾರ್ ನಿಶ್ಚಲ್ ನರೋನ್, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ತಳೇಕರ್, ಮೀನುಗಾರಿಕೆ ಸಹಾಯಕ ನಿರ್ದೇಶಕ ಪ್ರತೀಕ್, ಬಂದರು ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಂಜುನಾಥ್, ಚಿತ್ತಾಕೂಲಾ ಪಿಎಸ್ಐ ವಿಶ್ವನಾಥ ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.