News Kannada
Sunday, January 29 2023

ಉತ್ತರಕನ್ನಡ

ಕಾರವಾರ: ನಗರಸಭೆ ಸಿಬ್ಬಂದಿ ಮೇಲೆ ಹಲ್ಲೆ, ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

Kodagu: PDO attacked for obstructing government duty
Photo Credit : Pixabay

ಕಾರವಾರ: ಫುಟ್‌ಪಾತ್‌ನಲ್ಲಿ ನಿಂತು ವ್ಯಾಪಾರ ಮಾಡಬೇಡಿ ಎಂದಿದ್ದಕ್ಕೆ ಕೆಲ ಬೀದಿ ಬದಿ ವ್ಯಾಪಾರಿಗಳು ನಗರಸಭೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ಸಿದ್ಧಿ ವಿನಾಯಕ ದೇವಸ್ಥಾನ ಬಳಿ ಗುರುವಾರ ನಡೆದಿದೆ.

ಇಲ್ಲಿನ ಈಜುಕೊಳದ ಬಳಿ ಹೂ ಮತ್ತು ಹಣ್ಣು ಮಾರಾಟ ಮಾಡುವ ಬೀದಿ ವ್ಯಾಪಾರಿಗಳಿಗಾಗಿ ನಗರಸಭೆ ಪ್ರತ್ಯೇಕ ಮಾರುಕಟ್ಟೆ ನಿರ್ಮಿಸಿ ಕೊಟ್ಟಿದೆ. ಆದರೂ ಕೆಲವರು ಫುಟ್‌ಪಾತ್ ಮೇಲೆ ಬಂದು ವ್ಯಾಪಾರ ಮಾಡುತ್ತಿರುವುದನ್ನು ಗಮನಿಸಿ ನಗರಸಭೆ ಸಿಬ್ಬಂದಿ ಸ್ಥಳಕ್ಕೆ ಬಂದು ವ್ಯಾಪಾರಿಗಳನ್ನು ಪ್ರಶ್ನಿಸಿದ್ದಾರೆ. ಈ ವೇಳೆ ನಗರಸಭೆ ಸಿಬ್ಬಂದಿ ಮತ್ತು ವ್ಯಾಪಾರಿಗಳ ಮಧ್ಯೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಾಪಾರಿಗಳನ್ನು ನಗರಸಭೆ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಾಪಾರಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ನಗರದ ಪ್ರಮುಖ ಪ್ರದೇಶದಲ್ಲಿಯೇ ಈ ಘಟನೆ ನಡೆದಿದ್ದರಿಂದ ಕೆಲ ಹೊತ್ತಿನವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು.

See also  ಮಾಜಾಳಿ ಕಡಲತೀರದಲ್ಲಿ ಟೈಗರ್ ಶಾರ್ಕ್ ಕಳೇಬರ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು