ಕಾರವಾರ: ಅಪರಿಚಿತ ವಾಹನ ಬಡಿದು ಚಿರತೆಯೊಂದು ಮೃತಪಟ್ಟಿರುವ ಘಟನೆ ಕುಮಟಾ ತಾಲೂಕಿನ ಬೆಟ್ಕುಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಟ್ಕುಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಮೃತಪಟ್ಟಿದೆ.
ಸ್ಥಳೀಯರು ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚರಿಸುವಾಗ ಅಪಘಾತದಲ್ಲಿ ಸಾವನ್ನಪ್ಪಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದು, ಅಪಘಾತದ ರಭಸಕ್ಕೆ ಚಿರತೆಯ ಹೊಟ್ಟೆಯ ಕರುಳು ಹೊರಕ್ಕೆ ಬಂದಿವೆ.
ಅರಣ್ಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.