ಕಾರವಾರ: ಕಟ್ಟಡ ಕಾರ್ಮಿಕರ ಮಕ್ಕಳ ಪಾಲನೆ – ಪೋಷಣೆಗಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಪ್ರಾರಂಭಿಸಲಾಗಿರುವ ರಾಣಿ ಚೆನ್ನಮ್ಮ ಶಿಶುಪಾಲನಾ ಕೇಂದ್ರದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಯಲ್ಲಾಪುರ ಪಟ್ಟಣದಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ( minister) ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ನಾಡು ಕಟ್ಟುವ ಕಾಯಕದಲ್ಲಿ ಶ್ರಮಿಸುತ್ತಿರುವ ಶ್ರಮಿಕರ ಮಕ್ಕಳ ಪಾಲನೆ ಪೋಷಣೆಗಾಗಿ ಮಂಡಳಿಯ ವತಿಯಿಂದ ರಾಜ್ಯಾದ್ಯಂತ ಶಿಶುಪಾಲನಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಮಕ್ಕಳಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಪ್ರೋತ್ಸಾಹಿಸಲು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಶಿಶುಪಾಲನಾ ಕೇಂದ್ರಗಳಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಮಂಡಳಿಯ ಮೂಲಕವಾಗಿ ಹಮ್ಮಿಕೊಳ್ಳಲಾಗುವುದು ಎಂದರು.
ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ,ಹಿರಿಯರಾದ ರಾಮು ನಾಯ್ಕ, ಪ.ಪಂ ಉಪಾಧ್ಯಕ್ಷರಾದ ಶ್ಯಾಮಲಿ ಪಾಟಣಕರ್, ಪ.ಪಂ ಸದಸ್ಯರಾದ ಪ್ರಶಾಂತ ತಳವಾರ, ಗೀತಾ ಭಂಡಾರಿ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಶಿಶು ಪಾಲನಾ ಕೇಂದ್ರದ ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.