ಕಾರವಾರ: ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಪೈಲೆಟ್ ಆಧಾರದ ಮೇಲೆ ಜ್ಞಾನ ದರ್ಶನ ಕಾರ್ಯಕ್ರಮ ಆಯೋಜಿಸಿ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 50 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಷ್ಠಿತ ಐಐಟಿ, ಐಐಎಂ ಮುಂತಾದ ಉನ್ನತ ಸಂಸ್ಥೆಗಳಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಫರೇಡ್ ಮೈದಾನದಲ್ಲಿ ಗುರುವಾರ 74ನೇ ಗಣರಾಜ್ಯೋತ್ಸವದ ನಿಮಿತ್ತ ರಾಷ್ಟç ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ರೂಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದು ವಿವಿಧತೆಯಲ್ಲಿ ಏಕತೆಯನ್ನು ಸಾರುವ ಏಕೈಕ ರಾಷ್ಟç ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಸದೃಢ ರಾಷ್ಟçವಾಗಿ ಭಾರತ ಬೆಳೆದು ನಿಂತಿದೆ.
ಭವ್ಯ ಭಾರತವನ್ನು ಅಖಂಡ ಶಕ್ತಿಶಾಲಿ ರಾಷ್ಟçವನ್ನಾಗಿ ರೂಪಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂಬುದನ್ನು ನಾವು ಹೆಮ್ಮೆಯಿಂದ ಹೇಳಬಹುದು. ಸಂವಿಧಾನದ ಆಶಯದ ಭದ್ರ ಬುನಾದಿಯ ಮೇಲೆ ನಾಡ ಕಟ್ಟುವ ಕೆಲಸ ನಮ್ಮ ಸರ್ಕಾರ ಮುಂದುವರೆಸಿದೆ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಬಿಕೆಯಿರಿಸಿದ್ದು, ಆರೋಗ್ಯ, ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ. ಸಮಾಜದ ಕೊನೆಯ ವ್ಯಕ್ತಿಯೂ ಬದುಕಿನಲ್ಲಿ ಭದ್ರತೆಯ ಭಾವ ಕಾಣಬೇಕು ಎಂಬ ಆಶಯದಿಂದ ನಮ್ಮ ಸರ್ಕಾರ ದೂರದೃಷ್ಟಿಯ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ.
ಸರ್ವರಿಗೂ ಗುಣಮಟ್ಟದ ಆರೋಗ್ಯ ಸೌಲಭ್ಯ ಒದಗಿಸುವ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ, ಸಾಮಾಜಿಕ ಭದ್ರತಾ ಯೋಜನೆಗಳಡಿ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಮಾತೃಪೂರ್ಣ ಯೋಜನೆ, ವಿಧವೆಯರ ಹಾಗೂ ಅಂಗವಿಕಲರ ಮಾಸಾಶನ ಮೊತ್ತವನ್ನು ಹೆಚ್ಚಿಸಿದ್ದು, ಹಿರಿಯ ನಾಗರಿಕರು, ವಿಕಲಚೇತನರಲ್ಲಿ ಹೊಸ ಚೈತನ್ಯ ತುಂಬುವ ಪ್ರಯತ್ನ ಮಾಡಿದ್ದೇವೆ, ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವುದು. ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.