ಕಾರವಾರ: ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕಿ ರೂಪಾಲಿ ನಾಯ್ಕ ಅವರು ಶ್ರಮಿಸುತ್ತಿದ್ದಾರೆ. ಅವರ ತೇಜೋವಧೆಗೆ ಸ್ಥಳೀಯ ಪತ್ರಿಕೆಯೊಂದು ಕೆಲಸ ಮಾಡುತ್ತಿದೆ ಎಂದು ಬಿಜೆಪಿಯ ಕಾರವಾರ ಮತ್ತು ಅಂಕೋಲಾ ತಾಲ್ಲೂಕಿನ ಮಂಡಲ, ಮೋರ್ಚಾದ ಪದಾಧಿಕಾರಿಗಳು ಆರೋಪಿಸಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ ಗುನಗಿ ಮಾತನಾಡಿ, ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಹಿಂದೆದ್ದೂ ಕಾಣದ ರೀತಿಯಲ್ಲಿ ಅಭಿವೃದ್ಧಿ ಆಗಿದೆ. ಮುಂಬರುವ ಚುನಾವಣೆಯಲ್ಲಿ ಅವರೇ ಗೆಲುವು ಸಾಧಿಸುತ್ತಾರೆ. ಇದನ್ನು ಕೆಲವರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.
ನಗರ ಮಂಡಲದ ಅಧ್ಯಕ್ಷ ನಾಗೇಶ ಕುರ್ಡೇಕರ್, ಜಗದೀಶ ನಾಯಕ ಮೊಗಟಾ, ಬಿಜೆಪಿ ಮಾಧ್ಯಮ ಸಹ ಸಂಚಾಲಕಿ, ನಗರಸಭೆ ಸದಸ್ಯೆ ರೊಶ್ನಿ ಮಾಳ್ಸೇಕರ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ನಗರಸಭೆ ಸದಸ್ಯೆ ಮಾಲಾ ಹುಲಸ್ವಾರ, ಮಹಿಳಾ ಮೋರ್ಚಾ ಕಾರವಾರ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿ ಸುಜಾತಾ ಬಾಂದೇಕರ್, ವೃಂದಾ ದಾಮ್ಸೆಂಡೆಕರ್, ನಗರಸಭೆ ನಾಮನಿರ್ದೇನ ಸದಸ್ಯ ಪ್ರದೀಪ ಗುನಗಿ, ನಗರಸಭೆ ಸದಸ್ಯ ಉಲ್ಲಾಸ ಕೇಣಿ, ವೈಶಾಲಿ ತಾಂಡೇಲ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.