News Kannada
Sunday, April 02 2023

ಉತ್ತರಕನ್ನಡ

ಕಾರವಾರ: ಎಲ್ಲ ವರ್ಗದ ಕಲ್ಯಾಣ ಆಶಯದ ಬಜೆಟ್‌ – ಸಚಿವ ಶಿವರಾಂ ಹೆಬ್ಬಾರ್ ಹರ್ಷ

Labour Minister Shivaram Hebbar Harsha
Photo Credit : By Author

ಕಾರವಾರ: ಉತ್ತರ ಕನ್ನಡ ಜಿಲ್ಲೆಗೂ ಬಂಪರ್ ಕೊಡುಗೆಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ಆಯವ್ಯಯದಲ್ಲಿಶ್ರಮಿಕರ ಅಭ್ಯುದಯಕ್ಕೆ ಮಹತ್ವದ ಹೆಜ್ಜೆಗಳನ್ನು ಇರಿಸಲಾಗಿದ್ದು, ಇದು ಯಾವುದೇ ತೆರಿಗೆ ಹೊರೆ ಇಲ್ಲದ ಕೃಷಿಕ, ಕಾರ್ಮಿಕ, ಮಹಿಳೆಯರು ಸೇರಿದಂಗೆ “ಸರ್ವೇ ಜನ ಸುಖಿನೋಭವಂತು” ಎಂಬುದನ್ನುಜಾರಿಗೊಳಿಸುವ ಮಹತ್ವಾಕಾಂಕ್ಷಿ ಬಜೆಟ್ ಆಗಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ಪ ತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಮುಂಗಡ ಪತ್ರದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಕಾರ್ಮಿಕರ ಸಂಕ್ಷೇಮದಿಂದ ಅಭಿವೃದ್ಧಿ ಸಾಧ್ಯ ಎಂಬುದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ನಂಬಿಕೆ ಇರುಸಿರುವುದು ಬಜೆಟ್‍ನಿಂದ ಸಾಬೀತಾಗಿದೆ ಎಂದಿದ್ದಾರೆ.

ರಾಜ್ಯಕ್ಕೆ ವಲಸೆ ಬಂದಿರುವ ಕಾರ್ಮಿಕರ ಯೋಗಕ್ಷೇಮದ ಹಿನ್ನೆಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೆರವು ನೀಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ನೀಡುವ ಸಲುವಾಗಿ ರಾಜ್ಯದಾದ್ಯಂತ 19 ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯ (ಇಎಸ್‍ಐ)ಗಳನ್ನು ಸ್ಥಾಪಿಸುವುದು ಎಂದು ತಿಳಿಸಿದ್ದಾರೆ. ಹುಬ್ಬಳ್ಳಿ- ದಾವಣಗೆರೆ ಇಎಸ್‍ಐ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯವನ್ನು 50ರಿಂದ 100ಕ್ಕೆ ಏರಿಸಿರುವ ಮುಖ್ಯಮಂತ್ರಿಗಳ ಕ್ರಮ ಅಭಿನಂದನೀಯ ಎಂದು ಹೆಬ್ಬಾರ್ ಹೇಳಿದ್ದಾರೆ.

ರಾಜ್ಯದ ಇಎಸ್‍ಐ ಆಸ್ಪತ್ರೆಗಳನ್ನು ಬಲಪಡಿಸಲು ಏಳು ಆಸ್ಪತ್ರೆಗಳಲ್ಲಿ ಐ.ಸಿ.ಯು. ಸ್ಥಾಪಿಸಲು ಆರು ಆಸ್ಪತ್ರೆಗಳಲ್ಲಿ ಆಯುಷ್ ಘಟಕ ಆರಂಭ, ಜಿಲ್ಲೆಗೆ ಒಂದರಂತೆ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಕೆ, ಹೊಸದಾಗಿ ಆರಂಭಿಸಿರುವ 19 ಇಎಸ್‍ಐ ಚಿಕಿತ್ಸಾಲಯಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಮತ್ತು ಆರು ಹೊಸ ಚಿಕಿತ್ಸಾಲಯಗಳನ್ನು ಆರಂಭಕ್ಕೆ ಮುಂದಡಿ ಇರಿಸಿರುವ ಮುಂಗಡ ಪತ್ರದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನು ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕಾರ್ಖಾನೆ, ಬಾಯ್ಲರುಗಳು ಮತ್ತು ಕೈಗಾರಿಕೆ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಸೇವೆಗಳನ್ನು ಸಕಾಲದಲ್ಲಿ ಸುಲಭವಾಗಿ ಒದಗಿಸುವ ಸಲುವಾಗಿ ಹೊಸ ಆನ್‍ಲೈನ್‍ ತಂತ್ರಾಂಶ ಅಭಿವೃದ್ಧಿಪಡಿಸಲು ಮುಂಗಡ ಪತ್ರದಲ್ಲಿ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿರುವ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಅಸಂಘಟಿತ ಕಾರ್ಮಿಕರ ವಲಯವನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಅಸಂಘಟಿತ ಕಾರ್ಮಿಕರ ಬದುಕಿಗೆ ಭದ್ರತೆ ಒದಗಿಸುವ ಸಲುವಾಗಿ “ಕರ್ನಾಟಕ ಅಸಂಘಟಿತ ಕಾರ್ಮಿಕರ ಕಲ್ಯಾಣ ನಿಧಿ” ಸ್ಥಾಪಿಸುವ ಪ್ರಕಟಣೆಯ ದೂರದೃಷ್ಟ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಸಂಘಟಿತ ವಲಯ ಭದ್ರತೆ ಯೋಜನೆಯಡಿಯಲ್ಲಿ ಆಸ್ತಿ ತೆರಿಗೆ ಮೇಲೆ ಹೆಚ್ಚಿನ ಸೆಸ್‍ ವಿಧಿಸದೆ ಆಂತರಿಕ ಸೆಸ್‍ಗಳಲ್ಲಿನ ಮಾರ್ಪಾ ಮೂಲಕ ರಾಜ್ಯದ 75 ಲಕ್ಷಕ್ಕೂ ಅಧಿಕ ಅಸಂಘಟಿತ ಕಾರ್ಮಿಕರಿಗೆ ಭದ್ರತೆ ಮೂಲಕ ಭರ್ಜರಿ ಕೊಡುಗೆ ನೀಡಲಾಗಿದೆ ಎಂದಿದ್ದಾರೆ.

See also  ಕಾರವಾರ: ಲಾರಿಗಳ ನಡುವೆ ಅಪಘಾತ, ಚಾಲಕ ಮೃತ್ಯು

ಎರಡು ಕಾರ್ಮಿಕ ಅದಾಲತ್‍ಗಳ ಮೂಲಕ ಕಾರ್ಮಿಕರ ಬಾಕಿ ಅರ್ಜಿಗಳ ವಿಲೇವಾರಿ, ಕಾರ್ಮಿಕ ಶಿಶುಪಾಲನಾ ಕೇಂದ್ರಗಳ ಸ್ಥಾಪನೆ, ಕಾರ್ಮಿಕ ಮಕ್ಕಳ ಶ್ರೇಯೋಭಿವೃದ್ಧಿಗೆ ಜಾರಿ ಮಾಡಿರುವ ವಿದ್ಯಾ ನಿಧಿ, ಉಚಿತ ಬಸ್ ಪಾಸ್, ಕಲಿಕಾ ಉಪಕರಣಗಳ ವಿತರಣೆ ಸೇರಿದಂತೆ ವಿವಿಧ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗಾಗಿ 23 ಲಕ್ಷ ಫಲಾನುಭವಿ ಮತ್ತು ಅವರ ಕುಟುಂಬಗಳಿಗೆ 1,785 ಕೋಟಿ ರೂ. ನೆರವು ನೀಡಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷಿಸಿದ್ದು, ಡಬಲ್ ಇಂಜಿನ್ ಸರ್ಕಾರ ಶ್ರಮಿಕರ ಏಳ್ಗೆಗೆ ಕಟಿಬದ್ಧವಾಗಿದ್ದು, ಕಾರ್ಮಿಕರ ಪರ ಸರ್ಕಾರದ ಬದ್ಧತೆಗೆ ಇದು ಸಾಕ್ಷಿಯಾಗಿದೆ ಎಂದು ಸಚಿವ ಹೆಬ್ಬಾರ್ ಅಭಿಪ್ರಾಯಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗೂ ಬಜೆಟ್‍ನಲ್ಲಿ ಆದ್ಯತೆ:

2023-24 ಮುಂಗಡ ಪತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಕೊಡುಗೆ ನೀಡಲಾಗಿದೆ ಎಂದು ಹರ್ಷಿಸಿರುವ ಸಚಿವ ಹೆಬ್ಬಾರ್, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್, ಪ್ರಧಾನ ಮಂತ್ರಿ ಮತ್ಸ್ಯ ಸಂಪದ  ಯೋಜನೆ, ಬಿತ್ತನೆ ಮೀನು ಮರಿ ದಾಸ್ತಾನಿಗೆ 20 ಕೋಟಿ ರೂ. ಪರಿಸರ ಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನ ವಿತರಣೆ, ದೋಣಿಗಳ ಸಂರಕ್ಷಣೆಗೆ ಅನುದಾನ, ಇಸ್ರೋದ ಜಿಪಿಎಸ್‍ ಅಳವಡಿಕೆಗೆ ಆದ್ಯತೆ 10 ಸಾವಿರ ಮೀನುಗಾರರಿಗೆ ವಸತಿ ಸೌಕರ್ಯ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಗೆ ಬಜೆಟ್‍ನಲ್ಲಿ ಕೊಡುಗೆ ನೀಡಲಾಗಿದೆ ಎಂದು ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.

ಸೀಮೆ ಎಣ್ಣೆ ದೋಣಿಗಳಿಗೆ ಪೆಟ್ರೋಲ್/ ಡೀಸೆಲ್ ಇಂಜಿನ್ ಅಳವಡಿಕೆಗೆ ಸಹಾಯಧನ, ಡೀಸೆಲ್ ಮಿತಿ 2 ಲಕ್ಷ ಕಿ.ಮೀಗೆ ಏರಿಕೆ, ಡಿಬಿಟಿ ಮೂಲಕ ಸೀಮೆ ಎಣ್ಣೆ ಸಹಾಯಧನ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ, “ಮತ್ಸ್ಯ ಸಿರಿ” ಯೋಜನೆಯಡಿ ದೋಣಿಗಳ ನಿರ್ಮಾಣ, ಐಐಟಿ ಮಾದರಿ ಕಾರವಾರ ಇಂಜಿನಿಯರಿಂಗ್ ಕಾಲೇಜು ಉನ್ನತೀಕರಣ, ಕಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದ ನಾರಾಯಣ ಗುರು ವಸತಿ ಶಾಲೆ, 250 ಕೋಟಿ ರೂ. ವೆಚ್ಚದಲ್ಲಿ 500 ಕಾಲು ಸಂಕಗಳ ನಿರ್ಮಾಣ, ಕಾರವಾರ ಜಿಲ್ಲೆಯಲ್ಲಿ ಹೊಸ ವಿಮಾನ ನಿಲ್ದಾಣ ಆರಂಭ ಹೀಗೆ ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಗೆ ಹತ್ತು ಹಲವು ಕೊಡುಗೆಗಳನ್ನು ನೀಡಲಾಗಿದೆ ಎಂದಿದ್ದಾರೆ. ಆರೋಗ್ಯ, ಮೂಲ ಸೌಕರ್ಯ, ಮೀನುಗಾರಿಕೆ, ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಅಡಿಯಲ್ಲಿ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಜಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಾಗಿದ್ದು, ಇದಕ್ಕೆ ಸಚಿವ ಶಿವರಾಂ ಹೆಬ್ಬಾರ್ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು