ಕಾರವಾರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಅಟಲ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ, ಏಕಲವ್ಯ ಮಾದರಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜಿಲ್ಲೆಯ ಅಂಕೋಲಾ, ಭಟ್ಕಳ್, ಹಳಿಯಾಳ, ಹೊನ್ನಾವರ, ಜೋಯಿಡಾ, ಕುಮಟಾ, ಮುಂಡಗೋಡ, ಸಿದ್ದಾಪುರ, ಶಿರಸಿ ಹಾಗೂ ಯಲ್ಲಾಪುರ ತಾಲೂಕುಗಳಲ್ಲಿ ಮಾರ್ಚ್ 12 ರಂದು ಪರೀಕ್ಷೆಗಳು ನಡೆಯಲಿವೆ.
ಈ ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ ಮತ್ತು ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಸಮಯದಿಂದ ಪರೀಕ್ಷೆ ಮುಕ್ತಾಯವಾಗುವವರಗೆ ಶಾಂತಿಯುತವಾಗಿ ನಡೆಸಲು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಸೂತ್ತಲು ಸಿ.ಆರ್.ಪಿ.ಸಿ. ಕಾಯ್ದೆ ಕಲಂ 144 ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.