News Kannada
Tuesday, February 27 2024
ಕ್ರೀಡೆ

ಕಾರವಾರ: ಜಿಲ್ಲೆಯ ಗ್ರಾಮೀಣ ಪ್ರತಿಭೆ ಕಾಮನ್‌ವೆಲ್ತ್ ಗೆ ಆಯ್ಕೆ

Rural talent selected for Commonwealth Games
Photo Credit : By Author

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಚೌಡಳ್ಳಿ ಗ್ರಾಪಂ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಯುವ ಕ್ರೀಡಾಪಟು ಎನ್.ಎಸ್.ಸಿಮಿ ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲ್ಲಿರುವ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ 4 × 100 ಮೀ ರಿಲೇ ಓಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್ ಗೆ ಆಯ್ಕೆಯಾಗಿ ಮುಂಡಗೋಡ ತಾಲೂಕಿನ ಕೀರ್ತಿಯನ್ನು ಹಾಗೂ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಹೀಗಾಗಿ ಈ ಕ್ರೀಡಾಪಟುವಿನ ಸಾಧನೆಗೆ ತಾಲೂಕಿನ ಜನ ಹೆಮ್ಮೆ ಪಡುತ್ತಿದ್ದಾರೆ. ಯಶಸ್ಸು ಸಿಗಲಿ ಎಂದು ಹಾರೈಸುತ್ತಿದ್ದಾರೆ.

ಕ್ರೀಡಾಕೂಟದಲ್ಲಿ ಭಾರತ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿ ಜಿಲ್ಲೆಯ ಕೀರ್ತಿ ಪತಾಕೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾರಿಸುವಂತಾಗಲಿ ಎಂದು ಶುಭ ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು