News Karnataka Kannada
Thursday, March 28 2024
Cricket
ಹಾಸನ

ಮಗುವನ್ನೇ ಕೊಂದು ಹೂತುಹಾಕಿದ ಪೋಷಕರು – ಮೃತದೇಹ ಹೊರತೆಗೆದು ಪರಿಶೀಲನೆ

Photo Credit :

ಹಾಸನ: ತಂದೆ ಹಾಗೂ ತಾಯಿ ಇಬ್ಬರು ಸೇರಿ ಸ್ವಂತ ಮಗುವನ್ನೇ ಕೊಂದು ಶವವನ್ನು ಕಾಫಿತೋಟದಲ್ಲಿ ಹೂತಿರುವ ಅನುಮಾನದ ಮೇಲೆ ಮಗುವಿನ ಮೃತದೇಹ ಹೊರತೆಗೆದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಆಲೂರು ತಾಲೂಕಿನ, ಕೆ.ಹೊಸಕೋಟೆ ಹೋಬಳಿಯ ಕಾಡ್ಲೂರು ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ತಾಲೂಕಿನ ಕೆ.ಹೊಸಕೋಟೆ ಹೋಬಳಿಗೆ ಆಗಮಿಸಿದ್ದ ಕೂಲಿಕಾರ್ಮಿಕರ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಕೆಲ ದಿನಗಳ ಹಿಂದೆ ಪತಿ, ಪತ್ನಿ ನಡುವೆ ಕೌಟುಂಬಿಕ ಕಾರಣಕ್ಕೆ ಜಗಳ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಮಗುವನ್ನು ಹೊಡೆದು ಸಾಯಿಸಿ ಶವವನ್ನು ಹೂತು ಹಾಕಲಾಗಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಆದರೆ ಮಗು ಅನಾರೋಗ್ಯದಿಂದಾಗಿ ಮೃತಪಟ್ಟಿದೆ ಎಂಬುದು ಪೋಷಕರ ವಾದವಾಗಿದೆ. ಈ ಕುರಿತು ಸ್ಥಳೀಯರೊಬ್ಬರು ನೀಡಿದ ದೂರಿನ ಮೇರೆಗೆ ಒಂದೂವರೆ ವರ್ಷದ ಗಂಡು ಮಗುವಿನ ಮೃತದೇಹ ಹೊರತೆಗೆದು ಪರಿಶೀಲನೆ ನಡೆಸಲಾಗುತ್ತಿದೆ. ಉಪವಿಭಾಗಾಧಿಕಾರಿ ಮಾರ್ಗದರ್ಶನ ದಲ್ಲಿ ಸ್ಥಳಕ್ಕೆ ಭೇಟಿ ನೀಡಿರುವ ತಹಶೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಹೂತಿರುವ ಶವವನ್ನು ಹೊರ ತೆಗೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು