News Kannada
Monday, October 03 2022

ಚಿಕಮಗಳೂರು

ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಇಂದು ಶೃಂಗೇರಿಯಲ್ಲಿ ಸ್ವಯಂಪ್ರೇರಿತ ಬಂದ್ - 1 min read

Photo Credit :

ಚಿಕ್ಕಮಗಳೂರು:ಕಳೆದ 14 ವರ್ಷಗಳಿಂದ ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗಾಗಿ ಜನರು ಆಗ್ರಹಿಸುತ್ತಲೇ ಇದ್ದಾರೆ. ಸೂಕ್ತ ಚಿಕಿತ್ಸೆ ಸಿಗದೆ ಜನರು ಪರದಾಡುತ್ತಿದ್ದಾರೆ. ಏನೇ ಗಂಭೀರ ಅನಾರೋಗ್ಯ ಉಂಟಾದರೆ ಮಂಗಳೂರು ಇಲ್ಲವೇ ಮಣಿಪಾಲಕ್ಕೆ ಹೋಗಬೇಕು. ಹೀಗಾಗಿ ಶೃಂಗೇರಿ ಪಟ್ಟಣದಲ್ಲಿ ಆಸ್ಪತ್ರೆ ನಿರ್ಮಿಸಲು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಾಳೆ ಸ್ವಯಂಪ್ರೇರಿತ ಶೃಂಗೇರಿ ಬಂದ್​ಗೆ ಕರೆ ನೀಡಲಾಗಿದೆ.

ಶೃಂಗೇರಿ ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಸ್ವಯಂಪ್ರೇರಿತ ಶೃಂಗೇರಿ ಬಂದ್ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸ್ಥಳೀಯ ಸಂಘಟನೆಗಳು 100 ಬೆಡ್​ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಆಗ್ರಹಿಸಿವೆ. ಸ್ಥಳೀಯ ಆಡಳಿತ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದಲೇ ಶುಕ್ರವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಸ್ವಯಂಪ್ರೇರಿತ ಶೃಂಗೇರಿ ಬಂದ್ ನಡೆಸಲು ವಿನಂತಿಸಲಾಗಿದೆ. ಪ್ರವಾಸಿಗರು ಹಾಗೂ ಭಕ್ತರು ಶೃಂಗೇರಿಗೆ ಬರಬಾರದು ಎಂದು ಮನವಿ ಮಾಡಲಾಗಿದೆ.ಸ್ವಯಂಪ್ರೇರಿತ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಂದ್​ಗೆ ವ್ಯಾಪಕ ಬೆಂಬಲ ದೊರೆತಿದ್ದು, ಶೃಂಗೇರಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ.

‘ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ’ ಈ ಬಂದ್​ಗೆ ಕರೆ ನೀಡಿದೆ. 14 ವರ್ಷಗಳಿಂದ ಸುಸಜ್ಜಿತ ಆಸ್ಪತ್ರೆಗೆ ಶೃಂಗೇರಿಯಲ್ಲಿ ಕೇಳಿ ಬರುತ್ತಲೇ ಇದೆ. ಶೃಂಗೇರಿಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಈ ಹಿಂದೆ ಸಾಕಷ್ಟು ಜನರು ಸಾವನ್ನಪ್ಪಿದ್ದಾರೆ. ಉತ್ತಮ ಚಿಕಿತ್ಸೆಗಾಗಿ ಶೃಂಗೇರಿ ಜನರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಅವಲಂಬಿಸಿದ್ದಾರೆ. ಶೃಂಗೇರಿಯಲ್ಲಿ ಉತ್ತಮ ಆಸ್ಪತ್ರೆ ಸ್ಥಾಪಿಸಬೇಕು ಎಂದು ಆಗ್ರಹಿಸಲೆಂದು ಜನರು ಸ್ವಯಂಪ್ರೇರಿತ ಶೃಂಗೇರಿ ಬಂದ್​ಗೆ ಕರೆ ನೀಡಿದ್ದಾರೆ.

See also  ಚಿಕ್ಕಮಗಳೂರು: ಚಿಲ್ಲರೆ ಹಣಕ್ಕಾಗಿ ಬಾರ್ ಕ್ಯಾಶಿಯರ್ ಕೊಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು