ಚಿಕ್ಕಮಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಪತ್ನಿ ಅನಿತಾ ಗೆಹ್ಲೋಟ್ ಸೇರಿದಂತೆ ಮೊಮ್ಮಕ್ಕಳೊಂದಿಗೆ ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದರ್ಶನ ಪಡೆದರು.
ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ರಾಜ್ಯಪಾಲರಿಗೆ ಸ್ವಾಗತ ಕೋರಲಾಯಿತು. ರಾಜ್ಯಪಾಲರು ಮತ್ತು ಪತ್ನಿ ಅನಿತಾ ಗೆಹ್ಲೋಟ್ ಅವರು ಶ್ರೀ ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಧರ್ಮಕರ್ತರಾದ ಡಾ ಜಿ. ಭೀಮೇಶ್ವರ ಜೋಷಿಯವರನ್ನು ಸೌಹಾರ್ಧಯುತವಾಗಿ ಭೇಟಿ ಮಾಡಿದರು. ನಂತರ ಶೃಂಗೇರಿಗೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ಶೃಂಗೇರಿ ಶಾರದಾಂಬೆ ಹಾಗೂ ಶ್ರೀ ವಿದ್ಯಾಶಂಕರ ಸ್ವಾಮಿ ದರ್ಶನ ಪಡೆದರು.
ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ರಾಜ್ಯಪಾಲರಿಗೆ ಸ್ವಾಗತ ಕೋರಲಾಯಿತು. ಶೃಂಗೇರಿ ಶಾರದಾ ಪೀಠದ ಶ್ರೀ ಶ್ರೀ ವಿದುಶೇಖರ ಭಾರತಿ ಶ್ರೀಗಳನ್ನು ಭೇಟಿ ಮಾಡಿದ ರಾಜ್ಯಪಾಲರು ಗುರುಗಳ ಆಶೀರ್ವಾದ ಪಡೆದರು. ದೇವಸ್ಥಾನದ ಆಡಳಿತ ಮಂಡಳಿಯಿಂದ ರಾಜ್ಯಪಾಲರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.