News Kannada
Wednesday, October 04 2023
ಚಿಕಮಗಳೂರು

ಚಿಕ್ಕಮಗಳೂರು: ಶೃಂಗೇರಿ ಮೂಲಕ ಪಂಚರತ್ನ ಯೋಜನೆ ರಥಯಾತ್ರೆ ಪ್ರಾರಂಭ

Chikkamagaluru: Pancharatna Project Rath Yatra begins through Sringeri
Photo Credit : News Kannada

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪಂಚರತ್ನ ಯೋಜನೆಯ ರಥಯಾತ್ರೆಯು ಫೆ.೨೫, ೨೬ ಮತ್ತು ೨೮ ರಂದು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಅತ್ಯಂತ ಚುರುಕು ನಿಂದ ಕಾರ್ಯ ನಿರ್ವಹಿಸುವ ಮೂಲಕ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲು ಮುಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಹೇಳಿದರು.

ನಗರದ ಜೆಡಿಎಸ್ ಕಚೇರಿಯಲ್ಲಿ ಪಂಚರತ್ನ ಯೋಜನೆಯ ಕುರಿತ ನಡೆದ ಪೂರ್ವಭಾವಿ ಸಭೆಯಲ್ಲಿ ಭಾನುವಾರ ಮಾತನಾಡಿದ ಅವರು ರಥಯಾತ್ರೆಯು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆಯಾ ಕ್ಷೇತ್ರದ ಅಧ್ಯಕ್ಷರು ಹಾಗೂ ಮುಖಂಡರುಗಳು ರಥಯಾತ್ರೆ ಯಶಸ್ವಿಗೊಳಿಸಲು ಕೈಜೋಡಿಸಬೇಕು ಎಂದು ಹೇಳಿದರು.

ರಥಯಾತ್ರೆಯು ಹೆಚ್.ಡಿ.ಕುಮಾ ರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಈಗಾಗಲೇ ೭೦ ಕ್ಷೇತ್ರಗಳಲ್ಲಿ ಸಂಚರಿಸಿ ಶೃಂಗೇರಿಯಿಂದ ಶ್ರೀ ಶಾರದಾಂಬೆಯ ದರ್ಶನ ಮೂಲಕ ಜಿಲ್ಲೆಗೆ ಪಾದಾರ್ಪಣೆ ಮಾಡಲಿದ್ದು ಮೊದಲ ಹಂತವಾಗಿ ಫೆ.೨೫ ರಿಂದ ೨೬ ಶೃಂಗೇರಿಗೆ ಹಾಗೂ ಫೆ.೨೮ ರಂದು ಎರಡನೇ ಹಂತವಾಗಿ ಚಿಕ್ಕಮಗಳೂರು ಕ್ಷೇತ್ರ ದಲ್ಲಿ ಪ್ರವಾಸ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಶೃಂಗೇರಿಯಿಂದ ಪ್ರಾರಂಭ ವಾಗುವ ಪಂಚರತ್ನ ಯೋಜನೆಯು ನಂತರ ದಿನದಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಆಗಮಿಸಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಬಹಿರಂಗ ಸಭೆ ನಡೆಸಲಾಗುವುದು ಎಂದ ಅವರು ರಾಜ್ಯದಲ್ಲಿ ಎರಡು ರಾಷ್ಟ್ರಿಗಳಿಗಿಂತ ಹೆಚ್ಚು ಶಿಸ್ತುಬದ್ಧವಾಗಿ ಯಾತ್ರೆಯನ್ನು ನಡೆಸಲಾಗುವುದು ಎಂದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ರಂಜನ್‌ಅಜಿತ್ ಕುಮಾರ್ ಪಂಚರತ್ನ ಯಾತ್ರೆ ಯು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರುಗಳು ಹಾಗೂ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ ಎಂದ ಅವರು ಮೂಡಿಗೆರೆ, ಕಡೂರು ಹಾಗೂ ತರೀಕೆರೆ ಭಾಗದಲ್ಲಿ ಮುಂದಿನ ದಿನಗಳಲ್ಲಿ ಯಾತ್ರೆಯ ಮಾಹಿತಿ ತಿಳಿಸಲಾಗುವುದು ಎಂದು ಹೇಳಿದರು.

ಚಿಕ್ಕಮಗಳೂರು ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಮಾತನಾಡಿ ಕ್ಷೇತ್ರದಲ್ಲಿ ರಥಯಾತ್ರೆ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ತಯಾರಿ ನಡೆಸಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಾಗುವ ಮೂಲಕ ದೊಡ್ಡಮಟ್ಟದಲ್ಲಿ ರಥಯಾತ್ರೆ ಮೂಲಕ ಪ್ರಚಾರ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷ ಹೆಚ್.ಎಸ್.ಮಂಜಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣಗೌಡ, ವಕ್ತಾರ ಹೊಲದಗದ್ದೆ ಗಿರೀಶ್, ಪಕ್ಷದ ಮೂಡಿಗೆರೆ ವಿಧಾನಸಭಾ ಅಭ್ಯರ್ಥಿ ಬಿ.ಬಿ.ನಿಂಗಯ್ಯ, ಯುವಜನತಾದಳ ಜಿಲ್ಲಾಧ್ಯಕ್ಷ ಸಿ.ಹೆಚ್.ಪ್ರೇಮ್‌ಕುಮಾರ್, ನಗರ ಮಹಾ ಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ, ಮುಖಂಡರುಗಳಾದ ನಿಸಾರ್ ಅಹ್ಮದ್, ದೇವಿಪ್ರಸಾದ್, ಡಿ.ಜೆ.ಸುರೇಶ್, ಇರ್ಷಾದ್, ದೇವರಾಜ್‌ಅರಸ್, ಶ್ರೀಮತಿ ಜಯಂತಿ, ನಾಗರತ್ನ ಹಾಗೂ ವಿವಿಧ ಕ್ಷೇತ್ರದ ಮುಖಂಡರುಗಳು ಉಪಸ್ಥಿತರಿದ್ದರು.

See also  ರಾಜ್ಯದಲ್ಲಿ ಉರ್ದು ಶಾಲೆ ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಬಿ.ಸಿ.ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು